ಕೊಪ್ಪಳ | ರಸ್ತೆ ಸರಿ ಇಲ್ಲದ್ದಕ್ಕೆ ಗ್ರಾಮಕ್ಕೆ ಬಾರದ ಬಸ್: ಶಾಲೆ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ

Date:

ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜಗೆ ತೆರಳಲು ಬಸ್ ಇಲ್ಲದೆ ಪರದಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

- Advertisement -

ಕವಲೂರು ಗ್ರಾಮದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬನ್ನಿಕೊಪ್ಪ ಗ್ರಾಮಕ್ಕೆ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ರಸ್ತೆ ಸರಿ ಇಲ್ಲದ್ದ ಕಾರಣಕ್ಕೆ ಇಂದು ಬಸ್ ಬಾರದೆ ಕಾರಣಕ್ಕೆ ಹಲವು ವಿದ್ಯಾರ್ಥಿಗಳು ಪರದಾಡಬೇಕಾದ ಸ್ಥಿತಿ ಉಂಟಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕವಲೂರು ಗ್ರಾಮಕ್ಕೆ ಬಸ್ ದಿನನಿತ್ಯ ಓಡಾಡುತ್ತಿತ್ತು. ರಸ್ತೆ ಪೂರ್ತಿ ಹದೆಗೆಟ್ಟಿದ್ದು, ಗುಂಡಿಗಳಿಂದ ತುಂಬಿ ಹೋಗಿದೆ. ಈ ಕಾರಣಕ್ಕೆ ಬಸ್‌ಗಳು ಕೆಟ್ಟು ಹೋಗುತ್ತಿವೆ ಹಾಗೂ ಅಪಘಾತಗಳು ಆಗುವ ಸಂಭವವಿರುತ್ತದೆ ಎಂದು ಸಾರಿಗೆ ಡಿಪೋ ಅಧಿಕಾರಿಗಳು ಬಸ್ ಬಿಡುವುದಕ್ಕೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ದುರಸ್ತಿ ಕಂಡಿಲ್ಲ. ಹದಗೆಟ್ಟ ರಸ್ತೆಯನ್ನು ಸರಿಪಡಿಸದೆ ಇರುವುದರಿಂದ ಬಸ್ ಗ್ರಾಮಕ್ಕೆ ಬಿಡಲು ಸಾರಿಗೆ ಅಧಿಕಾರಿಗಳು ಆತಂಕಗೊಂಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಸಂಬಂಧಪಟ್ಟವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಸಾವು

ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗ್ರಾಮದ ರಸ್ತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ಸಂಚಾರ ಸುಗಮಗೊಳಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...