ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಲ್ಲಿ ಹೊರಗುತ್ತಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್‌ಎಫ್‌ಐ) ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಾಯಿತು.
ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ಶಾಲೆಗಳಲ್ಲಿ ಕಳೆದ 15-20 ವರ್ಷಗಳಿಂದ ಗುತ್ತಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ಯಾವುದೇ ಉದ್ಯೋಗ ಭದ್ರತೆ ಇಲ್ಲ. ಖಾಯಂ ನೌಕರರ ವರ್ಗಾವಣೆಯಿಂದ ಹೊರಗುತ್ತಿಗೆ ನೌಕರರು ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿರುವ ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರು, ಕಾವಲುಗಾರರು, ಡಿ ಗ್ರೂಪ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್‌ಗಳು ಸೇರಿದಂತೆ ರಾಜ್ಯದ ಸಾವಿರಾರು ನೌಕರರಿಗೆ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ನಾಲ್ಕು ವರ್ಷಗಳಿಂದ ವೇತನವೂ ಹೆಚ್ಚಳವಾಗಿಲ್ಲ. ಬರುವ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಮಾಡಲು ಹೆಣಗಾಡುವಂತಾಗಿದೆ. ಹಾಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೇಡಿಕೆ ಈಡೇರುವವರೆಗೆ ಹೋರಾಟ ಮಾಡಲು ನಿರ್ಧರಿಸಿದ್ದೇವೆ. ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಈ ಕೂಡಲೇ ಸಭೆ ಕರೆದು ಚರ್ಚಿಸಬೇಕೆಂದು ಒತ್ತಾಯಿಸಿದರು.

ಮಾಸಿಕ ರೂ.31 ಸಾವಿರ ವೇತನ, ನಿವೃತ್ತಿವರೆಗೆ ಸೇವಾ ಭದ್ರತೆ, ಇಲಾಖೆಯಿಂದ ನೇರ ವೇತನ, ಖಾಸಗಿ ಎಜೆನ್ಸಿಗೆ ನೀಡಿದ ಟೆಂಡರ್ ರದ್ದುಗೊಳಿಸಬೇಕು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಬಸವರಾಜ್ ಸೂಳಿಬಾವಿ ವಿರೋಧ
ಈ ವೇಳೆ ಜಿಲ್ಲಾಧ್ಯಕ್ಷ ಗ್ಯಾನೇಶ್ ಕಡಗದ. ಪ್ರಮುಖರಾದ ಸುಂಕಪ್ಪ ಗದಗ. ಖಾಸಿಂ ಸಾಬ್ ಸರ್ದಾರ್. ರಫೀಕ್ ಜಗಿರ್ದಾರ್. ಫಕೀರಪ್ಪ, ದೊಡ್ಡಬಸವರಾಜ, ಪಾರ್ವತಿ, ಲೋಕೇಶ, ಹನುಮಂತ, ಭೀಮಣ್ಣ, ನಾಗರಾಜ, ಪಾರಮ್ಮ, ಶಾಂತಮ್ಮ, ರಮೇಶ್, ಪಾರಮ್ಮ, ವೆಂಕಟೇಶ್, ದಸ್ತಗಿರಿ ಇತರರು ಇದ್ದರು
