ಕೊಪ್ಪಳ | ವಿವಾದಾತ್ಮಕ ಹೇಳಿಕೆ ಆರೋಪ: ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಎಫ್‌ಐಆರ್

Date:

ವಕ್ಫ್ ಮಸೂದೆ ವಿರೋಧಿಸಿ ಕನಕಗಿರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮುಖಂಡರು ಹಿಂದೂ ಸಮಾಜದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಸೆ.13ರಂದು ನಡೆಸಿದ ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಮುಖಂಡ ಇಮ್ರಾನ್ ಭಾಷಣದಲ್ಲಿ ಮಾತನಾಡುವಾಗ ಹಿಂದೂಗಳ ವೀರ ಸಾವರ್ಕರ್ ಸಂತತಿ ಬಂದರೂ ಮುಸಲ್ಮಾನರ ವಕ್ಫ್ ಆಸ್ತಿಯನ್ನು ಮುಟ್ಟುಗೋಲು ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದರು. ವೀರ ಸಾವರ್ಕರ್ ಸಂತತಿಯನ್ನು ಬುಡದಿಂದ ಕಿತ್ತು ಎಸೆಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂಘಟನೆಯ ಕಾರ್ಯದರ್ಶಿ ಇಮ್ರಾನ್, ಕನಕಗಿರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ಮತ್ತು ಉಪಾಧ್ಯಕ್ಷ ದಾವೂದ್ ವಿರುದ್ಧ ಕಾರಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎಸ್‌ಡಿಪಿಐ

ಈ ವಕ್ಫ್ ಹೋರಾಟ ಕಾರಟಗಿಯಲ್ಲಿ ಸಣ್ಣ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿರಬಹುದು. ದೇಶದಲ್ಲಿ ಎನ್‌ಆರ್‌ಸಿ ಕಾಯ್ದೆ ಬಂದಾಗ ನಮ್ಮ ಸಮುದಾಯದ ಹೆಣ್ಣು ಮಕ್ಕಳು ಬೀದಿಗಿಳಿದು ಅನಿರ್ದಿಷ್ಟ ಧರಣಿ ಮಾಡಿ ರದ್ದುಗೊಳಿಸಿದರು ಎಂದು ಹೇಳಿಕೆಗಳನ್ನು ನೀಡಿದ್ದರು.

ಇದನ್ನು ಓದಿದ್ದೀರಾ? ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಗನಹಾಲ ಚಲೋ’ ಕಾಲ್ನಡಿಗೆ ಜಾಥಾ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಕಾರಟಗಿ ಮಂಡಲದ ಅಧ್ಯಕ್ಷ ಮಂಜುನಾಥ ಮಸ್ಕಿ ‘ಎಸ್‌ಡಿಪಿಐ ಕಾರ್ಯಕರ್ತರ ವಿವಾದಾತ್ಮಕ ಹೇಳಿಕೆ ನೀಡಿ ,ರಾಷ್ಟ್ರೀಯ ಏಕತೆ, ಧಾರ್ಮಿಕತೆ ಮತ್ತು ಸೌಹಾರ್ದತೆ ನಾಶ ಮಾಡುತ್ತದೆ. ಧರ್ಮದ ಹೆಸರಿನಲ್ಲಿ ಕೋಮು ಸೌಹಾರ್ದತೆ ಪ್ರಚೋದಿಸುತ್ತದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...