ಕೊಪ್ಪಳ | ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆ; ಕುಟುಂಬಕ್ಕೆ ಪರಿಹಾರ ವಿತರಣೆ

Date:

  • ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ
  • ಏ. 25ರಂದು ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಶ್ಯಾಡಲಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಮಹಿಳೆಯ ಮನೆಗೆ ತೆರಳಿ ಕುಟುಂಬದವರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರು 5 ಲಕ್ಷ ರೂ.ಪರಿಹಾರ ವಿತರಿಸಿ, ಸಾಂತ್ವನ ಹೇಳಿದ್ದಾರೆ.

ಏಪ್ರಿಲ್ 25 ರಂದು ಆಲಿಕಲ್ಲು ಮಳೆ ಸುರಿದಿತ್ತು. ಈ ವೇಳೆ ಶಾಂತವ್ವ ಅವರು ಸಿಡಿಲು ಬಡಿದು ಮೃತಪಟ್ಟಿದ್ದರು. ವಿಷಯ ತಿಳಿದ ಜಿಲ್ಲಾಧಿಕಾರಿಗಳು ಏ.26ರಂದು ಮೃತರ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ. ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ಸರಿಯಾಗಿ ಆರೈಕೆ ಮಾಡುವಂತೆ ಕುಟುಂಬದ ಹಿರಿಯರಿಗೆ ಸಲಹೆ ನೀಡಿದ್ದಾರೆ.

ನಂತರ, ಸುದ್ದಿಗಾರರೊಂದಿಗೆ ಮಾತನಾಡಿ, “ಸಿಡಿಲು ಬಡಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರವನ್ನು ಕೇವಲ 24 ಗಂಟೆಗಳ ಒಳಗೆ ನೀಡಲಾಗಿದೆ. ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಲಾಗಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಲಾಗುತ್ತದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಬೇಡಿಕೆ ಮೇರೆಗೆ ಕೇರಳದ ಕೊಚುವೇಲಿ-ಬೆಂಗಳೂರು ನಡುವೆ ವಿಶೇಷ ರೈಲು ಆರಂಭ

“ಮುಂಬರುವ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಂಭವ ಇದೆ. ಮಳೆಯಿಂದಾಗಿ ಮಾನವ ಜೀವ ಹಾನಿ ಮತ್ತು ಜಾನುವಾರುಗಳ ಪ್ರಾಣ ಹಾನಿ, ಬೆಳೆ ಹಾನಿ, ಮನೆಗಳು ಹಾನಿಯಾಗಿದ್ದಲ್ಲಿ ಕೂಡಲೇ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ವಿತರಿಸಲು ಕ್ರಮವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...