ಕೊಪ್ಪಳ | ಎಂಎಸ್‌ಪಿ‌ಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೋ ಜಾಗೃತಿ ಆಂದೋಲನ

Date:

ಎಂಎಸ್‌ಪಿ‌ಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಕೇಂದ್ರ ನಗರ ಹಾಗೂ ಕಾರ್ಖಾನೆಗಳಿರುವ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಆಂದೋಲನ ನಡೆಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲ ಸಮಿತಿಯು ನಿರ್ಧರಿಸಿದೆ.

- Advertisement -

ನಗರದ ಪ್ರವಾಸಿ ಮಂದಿರದಲ್ಲಿ ಮೂರನೇ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ “ಎಂಎಸ್‌ಪಿ‌ಎಲ್ ಬಲ್ಡೋಟಾ ಇತರೆ 50ಕ್ಕೂ ಹೆಚ್ಚು ಕಾರ್ಖಾನೆಗಳ ಬೂದಿ, ಧೂಳು ಪರಿಸರ ಮಾಲಿನ್ಯದಿಂದ ನಗರ ಹಾಗೂ ಸುತ್ತಲಿನ ಗ್ರಾಮಗಳ ಜನರು ಹಲವು ರೋಗಕ್ಕೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆದಾಗ್ಯೂ ಎಂಎಸ್‌ಪಿಎಲ್‌ ಕಾರ್ಖಾನೆಗಳ ವಿಸ್ತರಣೆಗೆ ಮುಂದಾಗಿರುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎರಡು ದಿನಗಳಿಂದ ಬೆಂಗಳೂರಿನಲ್ಲಿ ನಡೆದಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಎಂಎಸ್‌ಪಿ‌ಎಲ್ ಬಲ್ಡೋಟಾ ಕಂಪನಿಯು 54 ಸಾವಿರ ಕೋಟಿ ವೆಚ್ಚದಲ್ಲಿ ಕಾರ್ಖಾನೆ ವಿಸ್ತರಿಸಲು ಘೋಷಿಸಿದೆ. ಕಾರ್ಖಾನೆ ವಿಸ್ತರಣೆಯಾದರೆ ಶೇ:5 ರಷ್ಟು ತ್ಯಾಜ್ಯ ಧೂಳು ಹೆಚ್ಚಾಗುತ್ತದೆ. ಫೆಬ್ರುವರಿ 17 ರಿಂದ 21 ರವರೆಗೆ ಕೊಪ್ಪಳ ಜಿಲ್ಲಾ ಕೇಂದ್ರದ ನಗರ ಮತ್ತು ತಾಲೂಕಿನ ಕಾರ್ಖಾನೆಗಳ ಗ್ರಾಮೀಣ ಭಾಗಗಳಲ್ಲಿ ಜಾಗೃತಿ ಆಂದೋಲ ನಡೆಸಲು ಮತ್ತು ಕೊಪ್ಪಳ ನಗರದಲ್ಲಿ ಫೆಬ್ರವರಿ 22ರಂದು ಬೃಹತ್ ವಿಚಾರ ಸಂಕೀರ್ಣ ಕಾರ್ಯಕ್ರಮದಲ್ಲಿ ಪರಿಸರ ವಿಜ್ಞಾನಿ ನಾಗೇಶ್ ಹೆಗ್ಡೆ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ಅಪಾಯಕಾರಿಯಾದ ಮಾನವ ವಿನಾಶದ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ನಡೆದಿರುವ ಸಿದ್ದತೆ ಕುರಿತು ಚರ್ಚಿಸಲಾಯಿತು. ರಾಜ್ಯ ಬಿಜೆಪಿ, ಕಾಂಗ್ರೆಸ್, ಜೆಡಎಸ್ ಸಂಸದರು ಪಾರ್ಲಿಮೆಂಟಿನಲ್ಲಿ ಈ ಬಗ್ಗೆ ಧ್ವನಿ ಎತ್ತಲು ಒತ್ತಾಯಿಸಲು ನಿರ್ಧರಿಸಲಾಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ, ಕೊಪ್ಪಳ ಜಿಲ್ಲೆಯ ಪ್ರಗತಿಪರರ, ಪರಿಸರವಾದಿಗಳ ಮತ್ತು ಪ್ರಜ್ಞಾವಂತರ ಭಾರಿ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಯಿತು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ವಿವಿ ಮುಚ್ಚಲು ಮುಂದಾದರೆ ಜನಪ್ರತಿನಿಧಿಗಳ ವಿರುದ್ಧ ಹೋರಾಟದ ಎಚ್ಚರಿಕೆ

ಸಭೆಯಲ್ಲಿ ಹಿರಿಯ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರ, ಮಹಾಂತೇಶ ಕೊತ್ತಬಾಳ, ಡಿ ಹೆಚ್ ಪೂಜಾರ, ಹನುಮಂತಪ್ಪ ಹೊಳೆಯಾಚೆ, ಬಸವರಾಜ ಶೀಲವಂತರ, ಟಿ ರತ್ನಾಕರ ಕುಕನೂರ, ಖಾಸೀಮ್ ಸರ್ದಾರ, ಶರಣು ಗಡ್ಡಿ, ಜ್ಯೋತಿ ಗೊಂಡಬಾಳ, ಕೆ ಬಿ ಗೋನಾಳ, ಕಾಶಪ್ಪ ಚಲವಾದಿ, ರಾಘು ಚಾಕರಿ, ರಾಮಣ್ಣ ಚೌಡಕಿ, ಮುದುಕಪ್ಪ ಹೊಸಮನಿ ನರೆಗಲ್, ಮೂಕಪ್ಪ ಬಸಾಪುರ, ಶಿವಪ್ಪ ಹಡಪದ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...