ಕೊಪ್ಪಳ | ಪ್ಯಾಕೇಜ್ ಟೆಂಡರ್ ರದ್ದು ಪಡಿಸುವಂತೆ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಒತ್ತಾಯ

Date:

ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್’ಅನ್ನು ರದ್ದು ಪಡಿಸುವಂತೆ ಲೋಕೋಪಯೋಗಿ ಇಲಾಖೆ ಎದುರು ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ, ಪ.ಪಂಗಡದ ಗುತ್ತಿಗೆದಾರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

- Advertisement -

ಈ ವೇಳೆ ಸಂಘದ ವಿಭಾಗಿಯ ಅಧ್ಯಕ್ಷ ಸಿದ್ದು ಮಣ್ಣನವರ ಮಾತನಾಡಿ, ಕೊಪ್ಪಳ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಲ್ಬುರ್ಗಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಸೇರಿ ಪ.ಜಾತಿ, ಪ.ಪಂಗಡ, ಹಿಂದುಳಿದ, 2ಎ ಮತ್ತು ಪ್ರ.ವರ್ಗ 1 ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಅನ್ಯಾವೆಸಗುತ್ತಿದ್ದಾರೆ ಮತ್ತು ಕೆ.ಟಿ.ಪಿ.ಪಿ ಕಾಯ್ದೆಯ ಸಂಪೂರ್ಣ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ.ಜಾತಿ/ಪ.ಪಂಗಡಕ್ಕೆ ಶೇಕಡಾ 24.10% ಇದ್ದು ಈ ನಿಯಮಾನುಸಾರ ಟೆಂಡರ್ ಕರೆಯಬೇಕು. ಆದರೆ, ಪಿ.ಡಬ್ಲ್ಯೂ.ಡಿ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಪ.ಜಾತಿ ಮತ್ತು ಪ.ಪಂಗಡ, ಹಿಂದುಳಿದ ಸಮುದಾಯಗಳಿಗೆ ಅನ್ಯಾಯವೆಸಗುತ್ತಲೇ ಬಂದಿದ್ದಾರೆ. ಕೊಪ್ಪಳ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಕಲ್ಬುರ್ಗಿ ಮುಖ್ಯ ಇಂಜಿನಿಯರ್ ಇವರು ಸವರ್ಣಿಯ ಮೇಲ್ಜಾತಿ ಜನಪ್ರತಿನಿಧಿಗಳ ಕೈಗೊಂಬೆಯಾಗಿ ವರ್ತಿಸಿ ತಳಸಮುದಾಯಗಳಿಗೆ ಟೆಂಡರ್ ಹಂಚಿಕೆಯಲ್ಲೂ ಅನ್ಯಾಯ ಮಾಡುತ್ತಿದ್ದಾರೆ. ಈ ಪ್ಯಾಕೇಜ್ ಟೆಂಡರ್‌ನ್ನು ರದ್ದುಪಡಿಸುವವರೆಗೂ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಗುತ್ತೆಗೆದಾರ ಮಂಜುನಾಥ ಮಿಸಲಾಪುರ ಎಚ್ಚರಿಕೆ ನಿಡಿದರು.

ಈ ವರದಿ ಓದಿದ್ದೀರಾ? ಹಾವೇರಿ | ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಆಹೋರಾತ್ರಿ ಧರಣಿ

ಈ ವೇಳೆ ನಾಗರಾಜ್ ನಂದಾಪುರ, ಯಂಕಣ್ಣ ಹೊಸಳ್ಳಿ, ವೀರಭದ್ರಪ್ಪ ನಾಯಕ, ದ್ಯಾಮಣ್ಣ ಬಜೆಂತ್ರಿ, ನಿಂಗಪ್ಪ ಗದ್ದಿ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...