ಕೊಪ್ಪಳ | ಸರ್ಕಾರಿ ಶಾಲೆಗೆ ದಾನಿಗಳಿಂದ ಡಿಜಿಟಲ್‌ ಕೊಠಡಿ ನಿರ್ಮಾಣ

Date:

  • ದೇಣಿಗೆ ಸಂಗ್ರಹದಿಂದ ಸಿದ್ದವಾದ ಡಿಜಿಟಲ್‌ ಫಲಕ
  • ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ನೌಕರರ ನೆರವು

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಡಿಜಿಟಲ್‌ ಕೊಠಡಿ ನಿರ್ಮಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಡಿಜಿಟಲ್‌ ಕೊಠಡಿ ನಿರ್ಮಾಣಕ್ಕೆ ಶಿಕ್ಷಕರು, ಎಸ್.ಡಿ.ಎಮ್.ಸಿ.ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಸರ್ಕಾರಿ ನೌಕರರು, ಯುವಕರು, ಗ್ರಾಮಸ್ಥರು ಆರ್ಥಿಕ ನೆರವು ನೀಡಿ ವಿದ್ಯಾರ್ಥಿಗಳ ಆಧುನಿಕ ಶಿಕ್ಷಣಕ್ಕೆ ನೆರವಾಗಿದ್ದಾರೆ.

ಡಿಜಿಟಲ್ ಕೊಠಡಿ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಗ್ರಾಮದ ಸರ್ಕಾರಿ ನೌಕರ ರಮೇಶ ಬೂದಿಹಾಳ ಮಾತನಾಡಿ, “ಸರ್ಕಾರಿ ಶಾಲೆಯ ಮಕ್ಕಳು ಎಲ್ಲ ಸೌಕರ್ಯ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಬೇಕು ಎಂಬ ಹಂಬಲದಿಂದ ಸಮಾನ ಮನಸ್ಕರು ಈ ಕಾರ್ಯವನ್ನು ಮಾಡಿದ್ದೇವೆ” ಎಂದು ಹರ್ಷ ವ್ಯಕ್ತಪಡಿಸಿದರು.

ನಿಲಯ ಪಾಲಕ ಶರಣಪ್ಪ ಚಕ್ರಗಟ್ಟಿ ಮಾತನಾಡಿ, “ನಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡುವ ಬಹುತೇಕರು ರೈತಾಪಿ ಜನರ ಮಕ್ಕಳಾಗಿದ್ದು, ತಂತ್ರಜ್ಞಾನದ ಮಾಹಿತಿಯ ಬಗ್ಗೆ ಹೆಚ್ಚಿನ ಮಾಹಿತಿಯಿರುವುದಿಲ್ಲ. ಸರ್ಕಾರದ ಯಾವುದೇ ಅನುದಾನವಿಲ್ಲದೆ ದಾನಿಗಳ ಮೂಲಕ ಹಣ ಸಂಗ್ರಹಿಸಿ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಿ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡಲು ಮುಂದಾಗಿರುವುದು ಹೆಮ್ಮೆಯ ವಿಷಯ” ಎಂದು ಹೇಳಿದರು.

ಮುಖ್ಯ ಶಿಕ್ಷಕರಾದ ವೀರೇಶ ನಿಡಗುಂದಿ ಮಾತನಾಡಿ, “ದಾನಿಗಳು ಹಾಗೂ ಗ್ರಾಮಸ್ಥರ ಪ್ರೋತ್ಸಾಹದಿಂದ 2 ಲಕ್ಷ ವೆಚ್ಚದ ಶಾಲಾ ಕೊಠಡಿಯಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಲಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್‌ ಸ್ಮಾರ್ಟ್‌ ಕ್ಲಾಸ್‌ಗಳು ಮಕ್ಕಳ ಭವಿಷ್ಯಕ್ಕೆ ತುಂಬಾ ಸಹಕಾರಿಯಾಗಿವೆ. ಇದನ್ನು ಅರಿತು ವಿದ್ಯಾರ್ಥಿಗಳಿಗೆ ಡಿಜಿಟಲ್‌ ಸ್ಮಾರ್ಟ್‌ ಕ್ಲಾಸ್‌ ಒದಗಿಸಿರುವುದು ನಿಜಕ್ಕೂ ಶ್ಲಾಘನೀಯ” ಎಂದು ಹೇಳಿದರು.

ಶಾಲೆಯ ವಿದ್ಯಾರ್ಥಿಗಳು ಮಾತನಾಡಿ, “ಇಂಗ್ಲಿಷ್, ಕನ್ನಡ ವ್ಯಾಕರಣ, ರೈಮ್ಸ್, ಇಂಗ್ಲಿಷ್ – ಕನ್ನಡ ಪದ್ಯಗಳು, ಕವಿ – ಕಾವ್ಯ-ಪರಿಚಯ, ವಿಜ್ಞಾನ ಮತ್ತು ಗಣಿತ ಪ್ರಯೋಗಗಳ ಎಲ್ಲ ಪಾಠಗಳು ಉದಾಹರಣೆ ಸಮೇತ ಅತ್ಯುತ್ತಮ ಗುಣಮಟ್ಟದ ಧ್ವನಿ ಮತ್ತು ಚಿತ್ರಗಳ ಸಹಿತ ಪಾಠಗಳನ್ನು ಕಣ್ಣಿಗೆ ಕಟ್ಟುವಂತೆ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳ ಮುಂದೆ ಪ್ರತಿದಿನ ಪ್ರದರ್ಶಿಸಲಾಗುತ್ತದೆ ಈ ಮೂಲಕ ಫಲಕದ ಪಾಠಗಳಿಗಿಂತಲೂ ಈ ಸ್ಮಾರ್ಟ್ ಕ್ಲಾಸ್ ಪಾಠಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಸಾಧ್ಯವಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಸವಗೌಡ ಬಯ್ಯಾಪೂರ, ದೋಟಿಹಾಳ, ಈರಣ್ಣ ಕರಡಕಲ್, ಮುಖ್ಯ ಶಿಕ್ಷಕ ಗುರಪ್ಪ ಕುರಿ, ಗ್ರಾಮ ಪಂಚಾಯತಿ ಸದಸ್ಯರು, ಎಸ್‌ಡಿಎಂಸಿ ಅದ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಲಂ ನಿವಾಸಿಗಳ ನಿವೇಶನ ಅಭಿವೃದ್ಧಿಪಡಿಸಲು ಅಧಿಕಾರಿಗಳ ನಿರ್ಲಕ್ಷ್ಯ; ಜಿಲ್ಲಾಧಿಕಾರಿ ಕಿಡಿ

ಸ್ಲಂ ನಿವಾಸಿಗಳಿಗೆ ನಿವೇಶನಕ್ಕಾಗಿ ಭೂಮಿ ಮಂಜೂರು ಮಾಡಿದ್ದು, ಹಕ್ಕುಪತ್ರಗಳನ್ನು ವಿತರಣೆ ಮಾಡಿದೆ,...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...