ಕೊಪ್ಫಳ | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ರೈತರ ವಿರೋಧ; ಕೋರ್ಟ್ ಮೊರೆ ಹೋಗುವ ಎಚ್ಚರಿಕೆ

Date:

ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಗ್ರಾಮದ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಯುಕೆಇಎಂ ಲಿ. ಕಂಪನಿಯು ಗೊಂಡಬಾಳ ಗ್ರಾಮ ಪಂಚಾಯತಿಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದ್ದು, ಈ ಕುರಿತು ಗ್ರಾಮ ಪಂಚಾಯತಿ ತಕರಾರು ಅರ್ಜಿ ಸಲ್ಲಿಸಲು ಬಹಿರಂಗ ಸೂಚನೆ ಹೊರಡಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ ಹಾಗೂ ಸುತ್ತಲಿನ ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿ, ತಕರಾರು ಅರ್ಜಿ ಸಲ್ಲಿಸಿದ್ದಾರೆ. ಕಾರ್ಖಾನೆ ಸ್ಥಾಪಿಸಲು ಮುಂದಾದರೆ ಕೋರ್ಟ್‌ ಮೊರೆ ಹೋಗುವುದಾಗಿ ಹಾಗೂ ಬೃಹತ್‌ ಪ್ರಮಾಣದಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

- Advertisement -

ಈಗಾಗಲೇ ಕೈಗಾರಿಕಾ ಕಾರ್ಖಾನೆಗಳ ಸ್ಥಾಪನೆ ಹಾಗೂ ವಿಸ್ತರಣೆಯನ್ನು ವಿರೋಧಿಸಿ ಜಿಲ್ಲೆಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಕೆಲವು ತಿಂಗಳ ಹಿಂದೆ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರೋಧಿಸಿ ಸಾವಿರಾರು ಜನ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಇದರ ಬೆನ್ನಲ್ಲೇ ಮತ್ತೆ ಮುದ್ದಾಬಳ್ಳಿ ಗ್ರಾಮದಲ್ಲಿ ಕಾರ್ಖಾನೆಯ ವಿರುದ್ಧ ಕೂಗು ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈಗಾಗಲೇ ಕಾರ್ಖಾನೆಯ ಧೂಳು, ಹೊಗೆ ತಾಲೂಕಿನ ಸುಮಾರು 30 ಹಳ್ಳಿಯ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದರಿಂದ ಕೊಪ್ಪಳ ಪರಿಸರ ಪ್ರೇಮಿಗಳು ಹಾಗೂ ಜಿಲ್ಲಾ ಬಚಾವೋ ಆಂದೋಲನ ಹೋರಾಟಗಾರರು ಕೊಪ್ಪಳದ ಸುತ್ತಮುತ್ತಲೂ ಯಾವುದೇ ಹೊಸ ಕಾರ್ಖಾನೆಗಳು ಸ್ಥಾಪನೆಯಾಗುವುದು ಬೇಡ ಎಂದು ಬೃಹತ್ ಮಟ್ಟದ ಹೊರಾಟ ಮಾಡಿ ಸರಕಾರವನ್ನು ಎಚ್ಚರಿಸಿದ್ದೂ ಆಯಿತು.

ಇದೀಗ ಮುದ್ದಾಬಳ್ಳಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿದ್ದು, ಈಗಾಗಲೇ ಕಂಪನಿ ಕಾರ್ಖಾನೆ ಸ್ಥಾಪನೆಗೆ ಸರಕಾರದ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು; ಕೊನೆಯದಾಗಿ ಗೊಂಡಬಾಳ ಪಂಚಾಯತಿಯಿಂದ ನಿರಪೇಕ್ಷಣ ಪಡೆಯಲು ಅರ್ಜಿ ಸಲ್ಲಿಸಿದೆ.

ಈ ಕುರಿತು ಗೊಂಡಬಾಳ ಗ್ರಾಮ ಪಂಚಾಯತಿಯು ಬಹಿರಂಗ ನೋಟಿಸ್ ಹೊರಡಿಸಿದ್ದು, ಸಾರ್ವಜನಿಕರು ಗ್ರಾಮಸ್ಥರು ತಕರಾರು ಅರ್ಜಿಗಳಿದ್ದಲ್ಲಿ ಕಾಲಮಿತಿಯಲ್ಲಿ ಗ್ರಾಮ ಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆ ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಗಳ ಜನರಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ: ಕೊಪ್ಪಳ | ವಿಶ್ವಕ್ಕೆ ಭಾರತ ಕೊಟ್ಟ ಅಮೂಲ್ಯ ಸಂಪತ್ತು ʼಯೋಗʼ: ಕುಲಕರ್ಣಿ

ಯಾವುದೇ ಕಾರಣಕ್ಕೂ ಮುದ್ದಾಬಳ್ಳಿ ಗೊಂಡಬಾಳ ಸೀಮಾ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವುದು ಬೇಡ
ಎನ್ನುವ ಕೂಗು ಈ ಹಿಂದೆಯೂ ಪ್ರಬಲವಾಗಿ ವ್ಯಕ್ತವಾಗಿತ್ತು. ಈ ಹಿಂದೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಡೆದ ಅಹವಾಲು ಸಭೆಯಲ್ಲೂ ಸಹಿತ ನೂರಾರು ರೈತರು ನಮಗೆ ಸಕ್ಕರೆ ಕಾರ್ಖಾನೆ ಬೇಡ ಎನ್ನುವಂತ ತಕರಾರು ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು.

ಇವೆಲ್ಲ ಬೆಳವಣಿಗೆಗಳ ಮಧ್ಯೆಯು ಕಾಣದ ರಾಜಕೀಯ ಆಟದಿಂದ ಮುದ್ದಾಬಳ್ಳಿ ಯುಕೆಇಎಂ ಕಂಪನಿಯು ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಹವಣಿಸುತ್ತಿದೆ. ಕಾರ್ಖಾನೆಯ ಸ್ಥಾಪನೆಗೆ ಎಲ್ಲ ತಯಾರಿಯನ್ನು ಮಾಡಿಕೊಂಡಿದೆ. ಆದರೆ ಜನರು ಇದಕ್ಕೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತರು ದಿಢೀರ್ ಪ್ರತಿಭಟನೆ ನಡೆಸಿ ಗ್ರಾಪಂಗೆ ತಕರಾರು ಅರ್ಜಿ ಸಲ್ಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೋರ್ಟ್ ಮೋರೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...