ಕೊಪ್ಪಳ | ಮಹಾತ್ಮ ಗಾಂಧೀಜಿ ಅವರ ಆದರ್ಶಗಳು ಎಲ್ಲರೂ ಪಾಲಿಸಬೇಕು: ಮಕoದರ್ ಖಾನ್

Date:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೆ ಜಯಂತಿಯ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಕೊಪ್ಪಳ ನಗರದ ಗಾಂಧಿ ವೃತ್ತದಿಂದ ಇಂದಿರಾ ಗಾಂಧಿ ವೃತ್ತದ(ಜುಲೈ ನಗರ) ವರೆಗೆ ನಡೆಸಲಾಯಿತು.

- Advertisement -

ಗಾಂಧಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು,ಅನೇಕ ಮಹಿಳೆಯರು, ಯುವಕರು ,ಹಿರಿಯ ಮುಖಂಡರು ಭಾಗವಹಿಸಿ ಜಾಥಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಅಲ್ಪ ಸಂಖ್ಯಾತರ ಉಪಾಧ್ಯಕ್ಷರು ಸೈಯದ್ ಅಲಿ ಮಕoದರ್ ಖಾನ್. ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಮುನ್ನುಡಿ ಬರೆದರು. ಅದರಂತೆ ಅವರ ಅನೇಕ ಉಪವಾಸ ಸತ್ಯಾಗ್ರಹಗಳು,ಸಂದೇಶಗಳು ಇನ್ನು ಅನೇಕ ವಿಚಾರಗಳಿಂದ ಅವರು ನಮ್ಮೊಟ್ಟಿಗಿದ್ದಾರೆ. ಅವರ ವಿಚಾರಗಳನ್ನು ಎಲ್ಲರೂ ಪಾಲಿಸಬೇಕೆಂದು ಕರೆ ಕೊಟ್ಟರು.

ನಂತರ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರರು ಶೈಲಜಾ ಹಿರೇಮಠ ಗಂಗಾವತಿ, ಮಹಾತ್ಮ ಗಾಂಧೀಜಿ ಅವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖರು. ಅವರು ಹಾಕಿಕೊಟ್ಟ ಅಹಿಂಸಾ ತತ್ವ, ಶಾಂತಿ ಸಹೃದತೆಯಿಂದ ಇವರ ಆಶಯಗಳನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕೂಡ ಇಂದೇ. ಒಂದೇ ದಿನ ಇಬ್ಬರ ಮಹಿನಿಯರ ಆಶಯಗಳನ್ನು ಮುನ್ನಡೆಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಾಮಿದ ಮನಿಯಾರ್ ಮಾತನಾಡಿ, ಗಾಂಧೀಜಿಯವರ ಅಹಿಂಸಾ ತತ್ವ ಮಾರ್ಗ, ಅವರ ಕಂಡ ರಾಮರಾಜ್ಯದ ಕನಸನ್ನು ನನಸಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಅ.5ರಂದು ಬೆಂಗಳೂರಿನಲ್ಲಿ ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ: ಮಾರೆಪ್ಪ ಹರವಿ

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಶರಣಯ್ಯ ಗೌಡರ್ ಮಾಲಿ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಲ್ಲೇಶ್ ದೇವರಮನಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಮ್, ಗಂಗಾವತಿ ಯುವ ಕಾಂಗ್ರೆಸ್ ಮುಖಂಡ ಮಹಮದ್ ಆಸಿಫ್, ದಲಿತ ಹಿರಿಯ ಮುಖಂಡರಾದ ಬೋಜಪ್ಪ, ಬಸವರಾಜ್,ರವಿ ಬಾಬು ಆರತಿ, ಭೀಮಣ್ಣ ಕರಿಮೊತಿ, ಹುಸೇನಪ್ಪ ಕಲ್ಮನಿ, ಯಲ್ಲಮ್ಮ, ಈರಮ್ಮ, ಪ್ರಭಾವತಿ, ಹಾಗೂ ಕಾಂಗ್ರೆಸ್ ನ ಅನೇಕ ಕಾರ್ಯಕರ್ತರು, ಯುವಕರು ಹಾಜರಿದ್ದರು.

ವರದಿ : ಮಂಜುನಾಥ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...