ಕೊಪ್ಪಳ ಸಮೀಪ ಹಾಲವರ್ತಿಯಲ್ಲಿ ಬುಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುಮತಿ ನೀಡಿದ್ದು, ಇದರಿಂದ ಜಿಲ್ಲೆಯ ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಕಾರ್ಖಾನೆ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಪತ್ರ ಬರೆದಿರುವ ಅವರು, “ಸೋಮವಾರ ಕೊಪ್ಪಳ ಬಂದ್‌ಗೆ ಕರೆ ನೀಡಿರುವ ವಿಚಾರದಲ್ಲಿ ನೀವು ತೋರಿರುವ ನಡೆ ಸ್ವಾಗತಾರ್ಹ. ಈ ಬಂದ್‌ಗೆ ನನ್ನ ಬೆಂಬಲವಿದೆ. ನನ್ನ ಕ್ಷೇತ್ರದ ಜನರ ಬೆಂಬಲವೂ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿಕೊಳ್ಳುತ್ತೇನೆ’ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಫೆ.22ರಂದು ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ವಿಚಾರ ಸಂಕೀರ್ಣ
“ಕಾರ್ಖಾನೆ ಸ್ಥಾಪನೆ ಮಾಡಿದರೆ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪರಿಸರಕ್ಕೆ ಹಾನಿಯಾಗುತ್ತದೆ. ಜಾನುವಾರುಗಳ ಮೇಲೂ ಪರಿಣಾಮ ಬೀರುತ್ತದೆ. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿ ಮುಖ್ಯಮಂತ್ರಿ ಜೊತೆ ಚರ್ಚಿಸಿ ಕಾರ್ಖಾನೆ ಸ್ಥಳಾಂತರಕ್ಕೆ ಕ್ರಮ ವಹಿಸುತ್ತೇನೆ” ಎಂದು ಭರವಸೆ ನೀಡಿದರು.
