ಕೊಪ್ಪಳ | ಶಾಸಕ ಯತ್ನಾಳ್ ನುಡಿದಂತೆ ನಡೆಯಲಿ: ಸುರೇಶ ದಾಸರೆಡ್ಡಿ

Date:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಆಡಿದ ಮಾತಿನಂತೆ ನಡೆದುಕೊಂಡು ಅಂತರಧರ್ಮೀಯ ವಿವಾಹಕ್ಕೆ 5 ಲಕ್ಷ ಕೊಟ್ಟು ಅಭಿಯಾನ ಆರಂಭಿಸಬೇಕು. ಇಲ್ಲವಾದಲ್ಲಿ ಅವರನ್ನು ಆಧುನಿಕ ಭಾರತದ ಉತ್ತರ ಕುಮಾರ ಎಂದು ಕರೆಯಬೇಕಾಗುತ್ತದೆ ಎಂದು ಕಾಂಗ್ರೆಸ್‌ ಮುಖಂಡ ಸುರೇಶ ದಾಸರೆಡ್ಡಿ ಆಗ್ರಹಿಸಿದರು.

- Advertisement -

ಕೊಪ್ಪಳ ನಗರದ ಮೀಡಿಯಾ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, “ಬಿಜೆಪಿ ಉಚ್ಚಾಟಿತ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರವರು ಈ ಹಿಂದೆ ಕೊಪ್ಪಳಕ್ಕೆ ಬಂದಾಗ ʼಹಿಂದೂ ಯುವಕರು ಮುಸ್ಲಿಂ ಹುಡುಗಿಯರನ್ನು ಮದುವೆಯಾದರೆ ಐದು ಲಕ್ಷ ರೂಪಾಯಿ ಕೊಡುವ ಅಭಿಯಾನವನ್ನು ಪ್ರಾರಂಭ ಮಾಡುತ್ತೇನೆʼ ಎಂದು ಹೇಳಿದ್ದರು. ಅವರ ಮಾತಿಗೆ ಬದ್ದರಾಗಿ ನಿತಿನ್ ಶಿವಾಂಶ್ ಮತ್ತು ಸುಹಾನಾ ಸೈಯದ್ ಅವರಿಗೆ ಐದು ಲಕ್ಷ ರೂಪಾಯಿ ನೀಡಲಿ. ಆ ಮೂಲಕ ಧರ್ಮಾತೀತ ಭಾರತವನ್ನು ನಿರ್ಮಾಣ ಮಾಡಲು ಅವರು ಸಹಾಯ ಮಾಡಿದಂತೆ ಆಗುತ್ತದೆ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ಒಂದು ಕಡೆ ಲವ್ ಜಿಹಾದ್ ವಿರುದ್ಧ ಮಾತನಾಡೊದು, ಮತ್ತೊಂದು ಕಡೆ ಹಿಂದೂ ಯುವಕರು ಮುಸ್ಲಿಂ ಹುಡುಗಿಯರನ್ನು ಮದುವೆಯಾದರೆ ಐದು ಲಕ್ಷ ಹಣ ನೀಡುತ್ತೇನೆ ಎನ್ನುವುದು. ಇದು ಯುವ ಜನಾಂಗವನ್ನು ದಾರಿ ತಪ್ಪಸುವ ಕೆಲಸವಲ್ಲದೆ ಮತ್ತೇನೂ ಅಲ್ಲ. ಸಮುದಾಯಗಳ ನಡುವೆ ಅಂತರ ಸೃಷ್ಟಿಸುವ ಕೆಲಸವನ್ನು ಯತ್ನಾಳ್ ಮಾಡುತ್ತಿದ್ದಾರೆ. ಅವರು ಆಡಿದ ಮಾತಿಗೆ ತಪ್ಪದೇ ನಡೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೊಪ್ಪಳ | 17ರ ಬಾಲಕಿ ಮೇಲೆ ಗ್ರಾಪಂ ನೌಕರನಿಂದ ಅತ್ಯಾಚಾರ; ಪೋಕ್ಸೊ ದಾಖಲು

ಈ ವೇಳೆ ಯುವ ಕಾಂಗ್ರೆಸ್‌ಸ ಮಾಜಿ ತಾಲೂಕು ಅಧ್ಯಕ್ಷ ಗವಿಸಿದ್ದನಗೌಡ ಮಾಲಿಪಾಟೀಲ್, ಉಪಾಧ್ಯಕ್ಷ ಸಂತೋಷ ಕುರಿ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...