ಕೊಪ್ಪಳ | ಲಾರಿ ಡಿಕ್ಕಿ; ಪ್ರೀ ವೆಡ್ಡಿಂಗ್ ಶೂಟ್ ಗೆ ತೆರಳಿದ್ದ ಜೋಡಿ ಸಾವು

Date:

ಲಾರಿ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದ ಪರಿಣಾಮ ನವಜೋಡಿ ಸಾವನ್ನಪ್ಪಿರುವ ಘಟನೆ ಗಂಗಾವತಿ ತಾಲ್ಲೂಕು ರಾಜ್ಯ ಹೆದ್ದಾರಿ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ.

- Advertisement -

ಮೃತಪಟ್ಟಿರುವ ಕೊಪ್ಪಳ ತಾಲ್ಲೂಕಿನ ಇರಕಲ್‌ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ ಕಾರಟಗಿ ತಾಲ್ಲೂಕಿನ ಮುಸ್ಕೂರು ಗ್ರಾಮದ ಯುವತಿ (19) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕಳೆದ ಐದು ತಿಂಗಳ ಹಿಂದೆ ಕವಿತಾ ಮತ್ತು ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಮಾಡಲಾಗಿತ್ತು. ಇದೇ ಡಿಸೆಂಬರ್ 21 ರಂದು ಮದುವೆ ನಿಗಧಿಯಾಗಿತ್ತು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾಥಾ ತಡೆ; ಪ್ರತಿಭಟನಾಕಾರರ ಬಂಧನ ಖಂಡಿಸಿ ಪ್ರತಿಭಟನೆ

ಪ್ರೀ ವೆಡ್ಡಿಂಗ್ ಶೂಟಿಂಗ್ ಗೆ ತೆರಳಿ ವಾಪಸ್ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಬರುವಾಗ ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ಬಂದ ಲಾರಿಯೊಂದು ವೇಗವಾಗಿ ಬಂದು ದ್ವಿಚಕ್ರ ವಾಹನ ಸವಾರರ ಮೇಲೆ ಹರಿದು ಘಟನೆ ಜರುಗಿದೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಣಿಪಾಲದಲ್ಲಿ ಮಾರಕಾಸ್ತ್ರಗಳೊಂದಿಗೆ ಯುವಕನ ಬಂಧನ

ಉಡುಪಿ ನಗರದ ಮಣಿಪಾಲದ ವಿದ್ಯಾರತ್ನ ನಗರದ ಮಾಂಡವಿ ಎಮರಾಲ್ಡ್ ಕಟ್ಟಡದ ಹಿಂಭಾಗದ...

ಉಡುಪಿ | ಕೋಟ ಜಂಕ್ಷನ್ ಅಪಘಾತ; ಗಾಯಗೊಂಡಿದ್ದ ಕಾರು ಚಾಲಕ ಸಾವು

ಕೋಟ ಜಂಕ್ಷನ್‌ನಲ್ಲಿ ಅ. 26ರಂದು ಸಂಭವಿಸಿದ ಸೈಕಲ್‌ ಮತ್ತು ಕಾರಿನ ನಡುವಿನ...

ಉಡುಪಿ | ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಿರಲಿ: ಅಶೋಕ್ ಕುಮಾರ್ ಕೊಡವೂರು

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು....

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ...