ಒಮ್ನಿ ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರು ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಮಂಗಳಪುರ ಗ್ರಾಮದ ಜಾಫರ್ ಸಾಬ್(60), ಪುತ್ರ ಮುಸ್ತಫಾ(38) ಹಾಗೂ ಮೊಮ್ಮಗ ಶೋಯೆಬ್(8) ಮೃತ ದುರ್ದೈವಿಗಳು.
ಅನಾರೋಗ್ಯ ಹಿನ್ನೆಲೆ ಎರಡು ದಿನಗಳ ಹಿಂದೆ ಜಾಫರ್ ಸಾಬ್ ಅವರನ್ನು ಚಿಕಿತ್ಸೆಗಾಗಿ ಉತ್ತರ ಕನ್ನಡ ಜಿಲ್ಲೆಗೆ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದರು. ಒಂದೇ ಕುಟುಂಬದ 6 ಮಂದಿ ಒಮ್ನಿ ಕಾರಿನಲ್ಲಿ ತೆರಳಿದ್ದು, ಚಿಕಿತ್ಸೆ ಪಡೆದು ವಾಪಾಸ್ ಬರುವಾಗ ಅಪಘಾತ ಸಂಭವಿಸಿದೆ. 6 ಜನರ ಪೈಕಿ ಮೂವರು ಮೃತಪಟ್ಟಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಗವಿಶ್ರೀಗಳಿಂದ ಮೃತರ ಅಂತಿಮ ದರ್ಶನ : ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಮೃತರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿದ್ದ ಶಾಲಾ ಮಕ್ಕಳು ಗುಣಮುಖ
