ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Date:

Advertisements

ಮದ್ಯ ಸೇವಿಸಿದ ಬಳಿಕ ದುಷ್ಕರ್ಮಿಗಳ ಗುಂಪೊಂದು ಮಾದಿಗ ಎಂಬ ಕಾರಣಕ್ಕೆ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಯ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೊಪ್ಪಳ ತಾಲೂಕಿನ ಬೋಚನ ಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಮಾದಿಗ ಸಮುದಾಯದ ಯುವಕನನ್ನು ಗುಡದಪ್ಪ ಮುಳ್ಳಣ್ಣ(21) ಎಂದು ಗುರುತಿಸಲಾಗಿದೆ. ಗ್ರಾಮದ ನಾಗನಗೌಡ, ಯಲ್ಲಪ್ಪ, ಭೀಮಪ್ಪ, ಹನುಮಗೌಡ , ಪ್ರಜ್ವಲ್ ಹಾಗೂ ನವೀನ್ ಆರೋಪಿಗಳು ಎನ್ನಲಾಗಿದೆ.

“ಸೆ.9ರಂದು ಬೆಳಗ್ಗೆ ಗ್ರಾಮದ ಕಟ್ಟೆಯ ಮೇಲೆ ಕುಳಿತುಕೊಂಡು ಸಿಗರೇಟ್ ಸೇದುತ್ತಿದ್ದೆ. ಸ್ವಲ್ಪ ದೂರದಲ್ಲಿ ವಾಲ್ಮೀಕಿ ಸಮುದಾಯದ ಯುವಕರು ಮದ್ಯ ಸೇವಿಸಿ ಸಿಗರೇಟ್ ಸೇದಬಾರದು ಎಂದು ನನ್ನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾದರು. ಆಗ ಭಯಗೊಂಡು ನಾನು ಅಲ್ಲಿಂದ ಮನೆ ಕಡೆಗೆ ಹೋದೆ” ಎಂದು ಸಂತ್ರಸ್ತ ಯುವಕ ತಿಳಿಸಿದ್ದಾನೆ.

Advertisements

“ಅದೇ ದಿನ ಸಂಜೆ ಗಣಪತಿ ವಿಸರ್ಜನೆ ವೀಕ್ಷಿಸಲು ಹೋದಾಗ ಅದೇ ಯುವಕರು ನನ್ನ ಮೇಲೆ ಹಲ್ಲೆ ಮಾಡಿ, ತಲೆಗೆ ಹೊಡೆದಿದ್ದಾರೆ. ಬಳಿಕ ನಾನು ತೊಟ್ಟಿದ್ದ ಬಟ್ಟೆಯನ್ನು ಬಿಚ್ಚಿಸಿದ್ದಾರೆ. ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಕೈಗೆ ಸಿಕ್ಕ ಬಡಿಗೆ, ಚಪ್ಪಲಿಯಲ್ಲಿ ಹೊಡೆದಿದ್ದಾರೆ” ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಸಂತ್ರಸ್ತ ಯುವಕ ಗುಡದಪ್ಪ ವಿವರಿಸಿದ್ದಾರೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಹಲ್ಲೆಗೊಳಗಾದ ಯುವಕ ಗುಡದಪ್ಪ ಮುಳ್ಳಣ್ಣ, “ಮಾದಿಗ ಜಾತಿ ಎಂಬ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಕಿರಾಣಿ ಅಂಗಡಿ ಸ್ವಲ್ಪ ಅಂತರದಲ್ಲಿ ನಾನು ಸಿಗರೇಟ್ ಸೇದಲು ಕುಂತಾಗ ಯುವಕರ ತಂಡವೊಂದು ಸಿಗರೇಟ್ ಸೇದಬಾರದು, ಇಲ್ಲಿಂದ ಹೋಗು ಎಂದಾಗ ಮಾತಿನ ಚಕಮಕಿ ನಡೆಯಿತು. ಅಂದು ಸಂಜೆ 6ರ ಸುಮಾರಿಗೆ ಕಿರಾಣಿ ಅಂಗಡಿಗೆ ತೆರಳುತ್ತಿದ್ದಾಗ ನನ್ನನ್ನು ನಾಗನಗೌಡ ಎಂಬಾತ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಬಳಿಕ ಕಂಬಕ್ಕೆ ಕಟ್ಟಿ, ಸಿಕ್ಕ ಸಿಕ್ಕ ವಸ್ತುವಿನಲ್ಲಿ ಹಲ್ಲೆ ಮಾಡಿದ್ದಾರೆ. ಗಲಾಟೆಯ ವಿಷಯ ತಿಳಿಯುತ್ತಿದ್ದಂತೆ ನಮ್ಮ ಕುಟುಂಬಸ್ಥರು ಜಗಳ ಬಿಡಿಸಲು ಬಂದಾಗ, ಅವರನ್ನೂ ಕೂಡ ಅವಾಚ್ಯ ಪದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದರು” ಎಂದು ತಿಳಿಸಿದರು.

WhatsApp Image 2024 09 13 at 6.46.47 PM

“20 ಯುವಕರ ತಂಡ ನನ್ನ ಮೇಲೆ ಹಲ್ಲೆ ಮಾಡಿದರು. 7 ಜನರ ಮೇಲೆ ಮಾತ್ರ ಪ್ರಕರಣ ದಾಖಲಾಗಿದೆ. ನನಗೆ ಬಲಭಾಗದ ಭುಜಕ್ಕೆ ಹಾಗೂ ತಲೆಗೆ ಬಲವಾಗಿ ಗಾಯಗೊಂಡಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ. ಹಲ್ಲೆ ನಡೆಸಿದವರ ಪೈಕಿ ಕೆಲವು ಜನರ ಹೆಸರು ಇನ್ನೂ ಗೊತ್ತಾಗಲಿಲ್ಲ” ಎಂದು ತಿಳಿಸಿದರು.

ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ಬಾಸ್ ಅವರನ್ನು ಸಂಪರ್ಕಿಸಿದಾಗ, ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 6 ಜನ ಆರೋಪಿಗಳ ಪೈಕಿ ಮೂವರನ್ನು ಈಗಾಗಲೇ ಬಂಧನ ಮಾಡಲಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಉಡುಪಿ | ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಆರ್ ಮನೋಹರ್ ಅಭಿವೃದ್ಧಿಪಡಿಸಿದ ಬೈನಾಕ್ಯುಲರ್

ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ಕೇಳಿದಾಗ, “ಗಣಪತಿ ವಿಸರ್ಜನೆಯ ಭದ್ರತೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಅದನ್ನು ವಿಚಾರಣೆ ಮಾಡಿ ಮಾಹಿತಿ ತಿಳಿಸಲಾಗುವುದು” ಎಂದರು.

ಘಟನೆಯ ಬಗ್ಗೆ ಮಾಹಿತಿ ಪಡೆದ ಮಾದಿಗ ಮುಖಂಡ ಕರಿಯಪ್ಪ ಗುಡಿಮನಿ ನೇತೃತ್ವದ ಮುಖಂಡರ ನಿಯೋಗವು ಸಂತ್ರಸ್ತ ಯುವಕನ ಮನೆಗೆ ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕಿದ್ದಾರೆ.

WhatsApp Image 2024 09 13 at 6.46.46 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X