ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತ, ಹೋರಾಟಗಾರ ಸಿರಾಜ್ ಬಿಸರಳ್ಳಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಬೆಂಗಳೂರು ನಗರದ ಐಐಎಸ್‌ಸಿ ಆವರಣದಲ್ಲಿರುವ ಜೆ ಎನ್ ಟಾಟಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2023-2024 ನೇ ಸಾಲಿನ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.
ಸಿರಾಜ್ ಬಿಸರಳ್ಳಿಯವರು ಮುದ್ರಣ, ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾದ್ಯಮಗಳಲ್ಲಿ ಕೆಲಸ ಮಾಡಿದ್ದು, ಮಾಧ್ಯಮ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಅವರಿಗೆ 2023 ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ನೀಡಲಾಗಿದೆ.

ಜಿಲ್ಲೆಯ ಕೆ ಮಲ್ಲಿಕಾರ್ಜುನ್ ಅವರು 2024ನೇ ಸಾಲಿಗೆ ಎಚ್ ಎಸ್ ಹರೀಶ್ ಹಾಗೂ ಜಿಲ್ಲೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಯನ್ನು ಯುವ ಪತ್ರಕರ್ತ ಅಖಿಲ್ ಹುದೆವ್‌ರವರಿಗೆ ಪ್ರದಾನ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ಗಂಗಾವತಿ | ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ; 150 ಮಕ್ಕಳು ಅಪಾಯದಿಂದ ಪಾರು
ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ ಬಿ ಕಾವೇರಿ, ಅಕಾಡೆಮಿಯ ಕಾರ್ಯದರ್ಶಿ ಸಹನಾ ಎಂ, ಅಕಾಡೆಮಿಯ ಸದಸ್ಯರು, ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ್ ತಗಡೂರ್ , ಕೆ ನಿಂಗಜ್ಜ ಸೇರಿದಂತೆ ಇತರರು ಇದ್ದರು.