ಕೊಪ್ಪಳ | ಬಿಸಿಯೂಟ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ಸ್ವಲ್ಪ ಹೊತ್ತು ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸಂಬಂಧ ಗ್ರಾಮದ ನಿವಾಸಿ ನಜೀರ್ ಸಾಬ್ ಈ ದಿನ.ಕಾಮ್ ಜೊತೆಗೆ ಮಾತನಾಡಿದ್ದು, “ಮಧ್ಯಾಹ್ನ ಬಿಸಿಯೂಟ ನಂತರ ಮಕ್ಕಳಿಗೆ ಏಕಾಏಕಿ ವಾಂತಿ, ಹೊಟ್ಟೆನೋವು ಇನ್ನಿತರ ಸಮಸ್ಯೆ ಎದುರಾಗಿದೆ. ಸದ್ಯ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕುಷ್ಟಗಿ ತಾಲೂಕಿನ ಆಸ್ಪತ್ರೆಯಲ್ಲಿ 44 ಮಕ್ಕಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ದೋಟಿಹಾಳ ಗ್ರಾಮದ ಆರೋಗ್ಯ ಕೇಂದ್ರದಲ್ಲಿ 55 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಕೊಪ್ಪಳ 11

ಬಿಜಕಲ್ ಗ್ರಾಮದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದ್ದು, ಕಡಿಮೆ ಸಮಸ್ಯೆ ಇರುವ ಮಕ್ಕಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಅಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ.

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷ್ಯತನದಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಎಂದಿನಂತೆ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ. ನಂತರ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಕೊಡಗು, ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಭೂಕಂಪನದ ಅನುಭವ

ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ 500ಕ್ಕಿಂತಲೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್ ಅಶೋಕ್ ಶಿಗ್ಗಾವಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಅಲ್ಲೇ ಕೆಲಸ ಕಾರ್ಯ ನಿರ್ವಹಿಸುತ್ತಿರುವುದಾಗಿ ವರದಿಯಾಗಿದೆ.

ಕೊಪ್ಪಳ 1 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...