ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್ ಪರಿಕರಗಳನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅವರು ಹಿಂಪಡೆದಿದ್ದಾರೆ. ಅವರು ಸೋಮವಾರ (ನ.06) ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ನ. 09ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ಅರೆ. ಈ ಹಿನ್ನೆಲೆಯಲ್ಲಿ ಸತ್ಯಾಗ್ರಹ ಹಿಂಪಡೆದಿರುವುದಾಗಿ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ದೊಡ್ಡನ ಗೌಡ ಪಾಟೀಲ್,ಮಾಜಿ ಸಚಿವ ಹಾಲಪ್ಪ ಆಚಾರ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಶಾಸಕ ಬಸವರಾಜ ದಢೇಸುಗೂರು ಸೇರಿದಂತೆ ಮಾಜಿ ಕಾಡ ಅದ್ಯಕ್ಷ ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.