ಕೊಪ್ಪಳ | ಮೀಸಲಾತಿ ರದ್ದು ವಿರೋಧಿಸಿ ಬೀದಿಗಿಳಿದ ಮುಸ್ಲಿಂ ಮುಖಂಡರು

Date:

  • ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ
  • ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಮನವಿ

ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ ಮಾ.24 ರಂದು ನಡೆದ ಸಂಪುಟ ಸಭೆಯಲ್ಲಿ ಮುಸ್ಲಿಮ್ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ ಕೊಪ್ಪಳ ಜಿಲ್ಲೆಯ ಮುಸ್ಲಿಮ್‌ ಸಮುದಾಯದವರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಕೊಪ್ಪಳದ ಅಶೋಕ ವೃತ್ತದ ಬಳಿ ಆಗಮಿಸಿದ್ದ ನೂರಾರು ಮುಸ್ಲಿಮರು ಕೊಪ್ಪಳ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ“ಬಿಜೆಪಿ ಸರ್ಕಾರದ ತೀರ್ಮಾನವು ಅಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂವಿಧಾನದದಲ್ಲಿ ಧರ್ಮಧಾರಿತ ಮೀಸಲಾತಿ ಇಲ್ಲದಿರುವುದರಿಂದ 2(ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು” ಎಂದು ವಿವರಿಸಿದ್ದಾರೆ.

“ಸ್ವಾತಂತ್ರ್ಯ ನಂತರ ನಾಗನಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು 1990 ರ ಚಿನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಿರುವುದನ್ನು ಮತ್ತು ಮುಸ್ಲಿಮರು ಧಾರ್ಮಿಕ ಅಲ್ಪಸಂಖ್ಯಾತರು ಎಂಬುದು ಅವರನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆಯಲು ಕಾರಣವಾಗುವುದಿಲ್ಲ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಹಾಸನ | ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣಕ್ಕೆ ವಿರೋಧ; ಪ್ರತಿಭಟನೆಗೆ ಕರೆ

ಕರ್ನಾಟಕ ಹೈ ಕೋರ್ಟ್ (1979ರ ಏ.9 ರಂದು ಸೋಮಶೇಖರಪ್ಪ ಮತ್ತು ಇತರರು ಹಾಗೂ ಕರ್ನಾಟಕ ಸರ್ಕಾರ ಪ್ರಕರಣದಲ್ಲಿ) ಹೇಳಿರುವುದು ಕಾಣಬಹುದು. ವಾಸ್ತವಾಂಶ ಹೀಗಿದ್ದರೂ ಸಹ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಿರುವುದು ದೃಢವಾಗುತ್ತದೆ” ಎಂದು ಆರೋಪಿಸಿದ್ದಾರೆ.

“ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಮ್ ಸಮುದಾಯಕ್ಕೆ ನಿಗದಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕು” ಎಂದು ಆಗ್ರಹಿಸಿದ್ದಾರೆ.

“ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತ ದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕೆಂದು ಗೌರವನ್ವಿತ ರಾಜ್ಯಪಾಲರಾದ ತಾವುಗಳು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಮನವಿ ಮಾಡಿಕೊಂಡು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಪತ್ರ ರವಾನಿಸಿದರು.

ಪ್ರತಿಭಟನೆಯಲ್ಲಿ ಮಹಮದ್ ಸಲೀಂ ಮಂಡಲಗಿರಿ, ಅಮ್ಜಾದ್ ಪಾಷಾ, ಖದೀಫ್ ಬಾಸುರ್ ಸಾಬ್, ಕಾಟನ್ ಬಾಷಾ, ಜೆಡಿಎಸ್ ಮುಖಂಡ ವೀರೇಶ್ ಮಹಾಂತಯ್ಯ ಮಠ, ಯಮನೂರಪ್ಪ ನಾಯಕ್, ಮಲ್ಲು ಪೂಜಾರ್, ಮಾನ್ವಿ ಪಾಷಾ, ಹುಸೇನ್ ಪೀರ್ ಮುಜಾವರ್, ರಹಿಮ್ ಮಾಕಂದಾರ್, ಆರ್ ಎಂ ರಫಿ, ಆದಿಲ್ ಪಟೇಲ್, ಆಯುಬ್ ಅಡ್ಡೆ ವಾಲೆ, ಹಾಜಿ ಹುಸೇನ್, ಸಿರಾಜ್ ಕೋತ್ಕಾರ್, ಸಲೀಂ ಗೊಂಡಬಾಳ, ನಿಜಮ ಮಾಳೆ ಕೊಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...