ಕೊಪ್ಪಳ | ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿಹೋದ ನರೇಗಾ ಕಾರ್ಮಿಕ

Date:

ನರೇಗಾ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್‌ನಲ್ಲಿ ನಿನ್ನೆ ನಡೆದಿದೆ.

- Advertisement -

ಬಸವೇಶ್ವರ ಕ್ಯಾಂಪ್‌ ನಿವಾಸಿ ಹನುಮಂತಪ್ಪ ಆದಾಪುರ ಕೊಚ್ಚಿಹೋದ ಕಾರ್ಮಿಕನೆಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕ್ಯಾಂಪ್‌ನಲ್ಲಿರುವ ನಾಲಾದಲ್ಲಿ ಕಳೆದ 7 ದಿನಗಳಿಂದ ಹೂಳೆತ್ತುವ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿರುವ ಹನುಮಂತಪ್ಪ ಆದಾಪುರ ಪಕ್ಕದಲ್ಲಿಯೇ ಇರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಹೋಗುವಾಗ ಜಾರಿ ನೀರಿಗೆ ಬಿದ್ದಿದ್ದಾನೆ. ಗಮನಿಸಿದ ಯುವಕರು ಹನುಮಂತಪ್ಪನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ನೀರಿನ ರಭಸಕ್ಕೆ ಹನುಮಂತಪ್ಪ ಕೊಚ್ಚಿ ಹೋಗಿದ್ದಾನೆ.

WhatsApp Image 2025 03 17 at 4.36.03 PM 1

ಮಾಹಿತಿ ತಿಳಿದ ಕೂಡಲೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಖಚಿತಪಡಿಸಿಕೊಂಡಿದ್ದಾರೆ. ತೆಪ್ಪದ ಮೂಲಕ ಕೊಚ್ಚಿ ಹೋದ ಹನುಮಂತಪ್ಪನನ್ನು ಹುಡುಕಲಾಗುತ್ತಿದೆ ಎಂದು ಪಿಡಿಒ ಲಕ್ಷ್ಮಣ ತಿಳಿಸಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರಿಗೆ ತಾಪಂ ಇಒ ಕೆ. ರಾಜಶೇಖ‌ರ್ ಮನೆಗೆ ತೆರಳಿ ಧೈರ್ಯ ತುಂಬಿದ್ದಾರೆ.

ಕಾಲುವೆಯಲ್ಲಿ ಜಾರಿ ಬಿದ್ದು ನೀರು ಪಾಲಾದ ವ್ಯಕ್ತಿಯ ಮೃತದೇಹವೇ ಸಿಕ್ಕಿಲ್ಲ. ತೆಪ್ಪದ ಮೂಲಕ ಪತ್ತೆಗೆ ಗ್ರಾಪಂ ಆಡಳಿತ ಮಂಡಳಿ ಮುಂದಾಗಿದೆ. ಈ ನಡುವೆ ನರೇಗಾ ಕಾರ್ಮಿಕರು ತಾಪಂ ಇಒ ರಾಜಶೇಖರಗೆ ಪರಿಹಾರ ಧನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

WhatsApp Image 2025 03 17 at 4.36.03 PM

ಇದನ್ನೂ ಓದಿ: ಕೊಪ್ಪಳ | ಪ್ರವಾಸಿಗರಿಗೆ ರಕ್ಷಣೆ ಇಲ್ಲ; ಎಲ್ಲಾ ಸಮಸ್ಯೆಗೂ ಹೆಣ್ಣನ್ನು ದೂಷಿಸುವುದು ಸರಿಯೇ?

ಈ ವೇಳೆ ಗಂಗಾವತಿ ಗ್ರಾಮೀಣ ಠಾಣೆ ಪಿಎಸ್‌ಐ ವೆಂಕಟೇಶ ಚವ್ಹಾಣ, ತಾಪಂ ಸಹಾಯಕ ನಿರ್ದೇಶಕಿ ಶೆರಪೊನ್ನಿಸಾ ಬೇಗಂ, ಜೆಇ ಕೊಟ್ರೇಶ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...