ಕೊಪ್ಪಳ | ಗೋಡೆಗಳ ಮೇಲೆ ಅಶ್ಲೀಲ ಚಿತ್ರ; ಆರೋಪಿ ಬಂಧನ

Date:

ಶಾಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿರುವ ಕಾಂಪೌಂಡ್‌ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಚಿತ್ರಿಸಿ, ವಿದ್ಯಾರ್ಥಿನಿಯ ಹೆಸರು ಬರೆದು ವಿಕೃತಿ ಮೆರೆದಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಕನಕಗಿರಿಯ ಕೆಪಿಎಸ್ ಮತ್ತು ಖಾಸಗಿ ಪಿಯು ಕಾಲೇಜಿನಲ್ಲಿ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಬಿಡಿಸಿ, ಚಿತ್ರದ ಬಳಿ ವಿದ್ಯಾರ್ಥಿನಿಯ ಹೆಸರನ್ನು ಬರೆಯಲಾಗಿತ್ತು. ಕೃತ್ಯದ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದರು. ಈ ಬೆನ್ನಲ್ಲೇ ಆರೋಪಿ ಮೆಹಬೂಬ ಸಿಕ್ಕಲಗಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಆರೋಪಿ ವಿರುದ್ಧ 2022ರ ಅಕ್ಟೋಬರ್‌ ಮತ್ತು 2023ರ ಜೂನ್‌ ತಿಂಗಳಿನಲ್ಲಿಯೇ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಆದರೂ, ಆತನನ್ನು ಬಂಧಿಸಲಾಗಿರಲಿಲ್ಲ. ಇದೀಗ, ಆತ ಮತ್ತೆ ವಿಕೃತ ವರ್ತನೆ ತೋರಿದ್ದು, ಆತನನ್ನು ಬಂಧಿಸಲಾಗಿದೆ.

ಆರೋಪಿಯು ತನ್ನ ಸಂಬಂಧಿಯಾಗಿದ್ದ ಅಪ್ರಾಪ್ತ ಬಾಲಕಿಯನ್ನು 2 ವರ್ಷಗಳಿಂದ ಪ್ರೀತಿಸುತ್ತಿದ್ದ. ಆಕೆ ಆರೋಪಿಯೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಳು. ಬಳಿಕ, ಆಕೆಯ ಬಗ್ಗೆ ಅಶ್ಲೀಲವಾಗಿ ಗೋಡೆಗಳ ಮೇಲೆ ಆರೋಪಿ ಬರೆಯಲಾರಂಭಿಸಿದ್ದ.

ಅಲ್ಲದೆ, ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಖಾತೆ ತೆರೆದು, ಅಶ್ಲೀಲ ಚಿತ್ರಗಳನ್ನು ಆಕೆಯ ಹೆಸರಿನಲ್ಲಿ ಪೋಸ್ಟ್‌ ಮಾಡುತ್ತಿದ್ದ ಎಂದೂ ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...