ಕೊಪ್ಪಳ | ಗಿಣಿಗೇರಾ ಪಿಎಚ್‌ಸಿಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಕೊಪ್ಪಳ ತಾಲೂಕಿನ ಗಿಣಿಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ. ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಮತ್ತು ನಾಗರಿಕ ಹೋರಾಟ ಸಮಿತಿಯು ಫೆ. 3ರಂದು ಗಂಗಾವತಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಿದೆ.

ಇಂದು ನಡೆದ ಪ್ರಚಾರಾಂದೋಲನದಲ್ಲಿ ಪಕ್ಷದ ಜಿಲ್ಲಾ ನಾಯಕ ಶರಣು ಗಡ್ಡಿ ಮಾತನಾಡಿ, “ಬೃಹತ್ ಕೈಗಾರಿಕೆಗಳನ್ನು ಹೊಂದಿರುವ ಗಿಣಿಗೇರಾ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಅಗತ್ಯತೆ ಬಹಳ ಇದೆ. ಆದರೆ ಈಗಿರುವ ಆಸ್ಪತ್ರೆ ಅಗತ್ಯ ಇರುವಷ್ಟು ವೈದ್ಯರನ್ನು ಹೊಂದಿಲ್ಲ. ಆಂಬುಲೆನ್ಸ್ ವ್ಯವಸ್ಥೆ ಇಲ್ಲ. ದೊಡ್ಡ ಮಟ್ಟದಲ್ಲಿ ವಲಸಿಗರು ಊರಲ್ಲಿ ಇರುವುದರಿಂದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಆರೋಗ್ಯ ಇಲಾಖೆ ಕ್ರಮ ಕೈಗೊಂಡಿಲ್ಲ. ಕಾರ್ಖಾನೆಗಳಿಂದ ಬರುವ ಧೂಳು ವಿಷಕಾರಿ ಅನಿಲದಿಂದ ಜನರು ನಿರಂತರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ಆತಂಕಕ್ಕೀಡುಮಾಡಿದೆ” ಎಂದು ಕಳವಳ ವ್ಯಕ್ತಪಡಿಸಿದರು.

WhatsApp Image 2025 01 31 at 1.12.48 PM

“ಸಾಮಾನ್ಯ ಕಾಯಿಲೆಗೂ ಕೂಡ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಜನ ದುಡ್ಡು ಕಳೆದುಕೊಳ್ಳುತ್ತಿದ್ದಾರೆ. ವಿಷಕಾರಿ ಅನಿಲದಿಂದ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಗ್ರಾಮಕ್ಕೆ ಕಾರ್ಖಾನೆಗಳಿಂದ ಸಿಎಸ್ಆರ್ ನಿಧಿಯನ್ನು ಸರಿಯಾಗಿ ಬಳಕೆ ಮಾಡದೆ ಜನಗಳ ಆರೋಗ್ಯವನ್ನು ನಿರ್ಲಕ್ಷಿಸಲಾಗಿದೆ. ಕೂಡಲೇ ಆರೋಗ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿಗಳು ಸುತ್ತಮುತ್ತಲ ಹಳ್ಳಿಗಳಿಗೆ ಭೇಟಿ ನೀಡಿ ಜನರ ಆರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸಮಿತಿ ಒತ್ತಾಯಿಸಿತು.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಮಾನಸಿಕ ದುರ್ಬಲರನ್ನು ಶೋಷಿಸುವುದೇ ಅಸಮಾನತೆಗೆ ಮೂಲ ಕಾರಣ: ನ್ಯಾ. ಮಂಜುನಾಥ ಬಾಗೇಪಲ್ಲಿ

ಪ್ರಚಾರಾಂದೋಲನದಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ವೇಳೆ ಗಿಣಿಗೇರಾ ನಾಗರಿಕ ಹೋರಾಟ ಸಮಿತಿಯ ಮುಖಂಡ ಮಂಗಳೇಶ ರಾಥೋಡ್, ಮೌನೇಶ್ ಹಲಗೇರಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಮುಖಂಡ ಶರಣು ಪಾಟೀಲ್, ಶಾರದಾ, ಮುಂತಾದ ಗ್ರಾಮಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X