ಕೊಪ್ಪಳ | ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡಿ; ಸಚಿವ ಜಮೀರ್ ಅಹ್ಮದ್‌ಗೆ ಮನವಿ

Date:

ಕೊಪ್ಪಳ ನಗರದ ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್ ಎ ಗಫಾರ್, ಉಪಾಧ್ಯಕ್ಷ ಮೌಲಾ ಹುಸೇನ್ ಹಣಗಿ ಮುಂತಾದವರು ಮನವಿ ಸಲ್ಲಿಸಿದರು.

- Advertisement -

“ನಗರಸಭೆ ಎದುರಿನ ಶಾದಿ ಮಹಲ್‌ ಬಾಡಿಗೆ ಪ್ರಸ್ತುತ ₹12,000 ಗಳು ಇದೆ. ಬಡ ಜನರು ಕೈಲಾದಷ್ಟು ದೇಣಿಗೆ ನೀಡಿದ ಹಣದಲ್ಲಿ ಜಾಗ ಖರೀದಿಸಿದ್ದು, ನಂತರ ಸರ್ಕಾರದಿಂದ ಬಂದ ವಿವಿಧ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗಿದೆ. ಆದರೆ ಆಗ ಚಂದ ನೀಡಿದ ಬಡವರಿಗೆ ಈಗ ಶಾದಿ ಮಹಲ್‌ನಲ್ಲಿ ಮದುವೆಗೆ ಪಡೆಯಲು ಸಾಧ್ಯವಾಗದಷ್ಟು ಬಾಡಿಗೆ ಏರಿಸುವುದರಿಂದ ಸಮಸ್ಯೆ ಅನುಭವಿಸಬೇಕಾಗಿದೆ. ಉಳ್ಳವರಿಗೆ ಶಾದಿ ಮಹಲ್ ಎಂಬಂತಾಗಿದೆ. ಈ ಹಿಂದೆ ಘೋಷಿಸಿದಂತೆ ಶಾದಿ ಮಹಲ್ ಬಾಡಿಗೆಯನ್ನು ಬಡವರಿಗೆ ಅನುಕೂಲವಾಗುವ ರೀತಿಯಲ್ಲಿ ₹3000 ಗಳಿಗೆ ನಿಗದಿಪಡಿಸಬೇಕು. ಶಾದಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ದೇವಸ್ಥಾನದ ದೇಣಿಗೆ ಹಣ ಶಾಲೆಯ ಕೊಠಡಿ ನಿರ್ಮಾಣಕ್ಕೆ ಬಳಕೆ; ಉದಾರತೆ ಮೆರೆದ ಗ್ರಾಮಸ್ಥರು

“ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹೆಚ್ಚಿಸಲು ಕ್ರಮವಹಿಸಬೇಕು. ರಾಜ್ಯದಾದ್ಯಂತ ವಕ್ಫ್ ಕ್ಯಾಂಟೀನ್‌ಗಳನ್ನು ಆರಂಭಿಸಬೇಕು. ವಿವಿಧ ತಾಂತ್ರಿಕ ಶಿಕ್ಷಣ ಬೋಧನಾ ತರಬೇತಿ ಕಾಲೇಜುಗಳು ಸರ್ಕಾರದಿಂದ ಮಂಜೂರಾಗಬೇಕು. ಶೂನ್ಯದಿಂದ ಪದವಿವರೆಗೆ ಧಾರ್ಮಿಕ ಹಾಗೂ ಲೌಕಿಕ ಶೈಕ್ಷಣಿಕ ಶಾಲಾ ಕಾಲೇಜುಗಳು ಪ್ರಾರಂಭಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...