ಕೊಪ್ಪಳ | ಇಂಗ್ಲಿಷ್‌ ಜ್ಞಾನದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು: ಪ್ರೊ. ಬಿ ಈಶ್ವರಪ್ಪ

Date:

ಗ್ರಾಮೀಣ ವಿದ್ಯಾರ್ಥಿಗಳು ಇಂಗ್ಲಿಷ್ ಜ್ಞಾನದಿಂದ ವಂಚಿತರಾಗಬಾರದು. ಭಾಷೆ ದೇಶದ ಗಡಿ ದಾಟಿ ಸ್ನೇಹದ ಸೇತುವೆಯಾಗಬೇಕು. ಭಾಷಾಭಿಮಾನದ ಹೆಸರಲ್ಲಿ ಕಂದಕ ಸೃಷ್ಟಿಸಬಾರದು ಎಂದು ಕೊಪ್ಪಳದ ವಿಕೆಕೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೊ. ಬಿ ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -

ಹೊಳಲು, ಮಾಗಳ ಮತ್ತು ಹಿರೇಹಡಗಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ದಿನದ ಇಂಗ್ಲಿಷ್ ಪರೀಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದವರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಇಂಗ್ಲಿಷ್ ವಿಷಯವನ್ನು ಚೆನ್ನಾಗಿ ಅರ್ಥೈಸಿಕೊಳ್ಳಬೇಕು. ಆಂಗ್ಲ ಭಾಷೆ ಹೆಚ್ಚಿನ‌ ಜ್ಞಾನಕ್ಕೆ, ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸಿಕೊಡಲು ಸಹಾಯ ಆಗಬೇಕು. ಇಂಗ್ಲಿಷ್ ಕಲಿಯುವಿಕೆಯಿಂದ‌ ನಿಮ್ಮ ಮನೆಯ ಮನದ ಭಾಷೆಯನ್ನೂ ನೀವು ಮರೆಯಬಾರದು” ಎಂದು ಕಿವಿ ಮಾತು ಹೇಳಿದರು.

WhatsApp Image 2025 01 12 at 8.42.51 AM

ಹಿರೇಹಡಗಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೊ. ಪ್ರಕಾಶ್ ಕಲ್ಲನಗೌಡ್ರು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಗ್ರಾಮೀಣ ಕಾಲೇಜುಗಳಲ್ಲಿನ ಫಲಿತಾಂಶ ಸುಧಾರಣೆಯ ಕ್ರಮವಾಗಿ ಈ ಇಂಗ್ಲಿಷ್ ಬೂಸ್ಟರ್ ಕಾರ್ಯಾಗಾರ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ: ರಾಜ ನಾಯ್ಕ

ಕಾರ್ಯಾಗಾರದಲ್ಲಿ ಉಪನ್ಯಾಸಕರಾದ ಎಂ. ರೇವಣಸಿದ್ಧಪ್ಪ, ಪರಶುರಾಮ ನಾಗೋಜಿ, ಎಚ್. ನಾಗರಾಜ, ತಾರಾಸಿಂಗ್ ಇದ್ದರು. ಜತೆಗೆ ಹೊಳಲು, ಹಿರೇಹಡಗಲಿ ಹಾಗೂ ಮಾಗಳ ಸರ್ಕಾರಿ ಪದವಿಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...