ಕೊಪ್ಪಳ | ಬೆಂಬಲ ಬೆಲೆ ಯೋಜನೆ: ಕಡಲೆಕಾಳು ಖರೀದಿ ಕೇಂದ್ರಗಳ ಪ್ರಾರಂಭ

Date:

Advertisements

ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಪ್ರತಿ ಕ್ವಿಂಟಾಲ್‌ಗೆ 5,650 ರೂ.ಗಳಂತೆ ಎಕರೆಗೆ 4 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಲ್‌ರಂತೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಯ ಸಭೆ ಜರುಗಿಸಿ, ಕೊಪ್ಪಳ ತಾಲ್ಲೂಕಿನ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ, ಕನಕಗಿರಿ ತಾಲೂಕಿನ ನವಲಿ ಹಾಗೂ ಕನಕಗಿರಿ. ಕುಷ್ಟಗಿ ತಾಲೂಕಿನ ಹನುಮಸಾಗರ, ತಾವರಗೇರಾ (ಮೆಣೇದಾಳ) ಹಾಗೂ ಕುಷ್ಟಗಿ. ಕುಕನೂರು ತಾಲೂಕಿನ ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ, ಕುಕನೂರಿನಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಯಲಬುರ್ಗಾ, ಮುಧೋಳ ಹಾಗೂ ತೊಂಡಿಹಾಳದಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ.

ನೋಡಲ್ ಅಧಿಕಾರಿಗಳ ವಿವರ: ಕಡಲೆಕಾಳು ಖರೀದಿ ಕೇಂದ್ರಗಳಾದ ಮುದ್ದಾಬಳ್ಳಿ, ಹಿರೇಸಿಂಧೋಗಿ, ಕವಲೂರು, ಅಳವಂಡಿ ಹಾಗೂ ಘಟ್ಟಿರೆಡ್ಡಿಹಾಳ ಖರೀದಿ ಕೇಂದ್ರಗಳಿಗೆ ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ವಿ.ಬಸವರಾಜ ಮೊ.ಸಂ: 9448765143, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದೆ.

Advertisements

ನವಲಿ ಹಾಗೂ ಕನಕಗಿರಿ ಖರೀದಿ ಕೇಂದ್ರಕ್ಕೆ ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹರೀಶ ಪತ್ತಾರ ಮೊ.ಸಂ: 9060893320. ಕುಷ್ಟಗಿ ಹನುಮಸಾಗರ, ತಾವರಗೇರಾ (ಮೆಣೇದಾಳ) ಖರೀದಿ ಕೇಂದ್ರಕ್ಕೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸುರೇಶ ಬಿ ತಂಗನೂರು ಮೊ.ಸಂ: 9880886909. ಚಿಕ್ಕಿನಕೋಪ್ಪ, ಬನ್ನಿಕೋಪ್ಪ, ತಳಕಲ್, ಮುಡಲಗೇರಿ, ಕುಕನೂರು, ಹಾಗೂ ಯಲಬುರ್ಗಾ, ಮುಧೋಳ ಮತ್ತು ತೊಂಡಿಹಾಳದಲ್ಲಿ (ಕೇಂದ್ರ ಕಚೇರಿ, ಕುಕನೂರು) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಗುರುಪ್ರಸಾದ್ ಗುಡಿ ಮೊ.ಸಂ: 9972054874, ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿದ್ದೀರಾ? ಅನಾರೋಗ್ಯದಿಂದ ಬಳಲುತ್ತಿರುವ ನಟಿ, ಬಿಜೆಪಿ ನಾಯಕಿ ಖುಷ್ಬೂ; ಬದಲಾದ ಮುಖಚರ್ಯೆ

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ರಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಕಡಲೆಕಾಳು ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ ಗುಣಮಟ್ಟದ ಕಡಲೇಕಾಳನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕೊಪ್ಪಳ ದೂ.ಸಂ: 08539-230040, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X