ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಾಲಾಜಿ ಟ್ರಾವೆಲ್ಸ್‌ನ ಬಸ್ ಅಪಘಾತಕ್ಕೊಳಗಾಗಿದ್ದು, ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.
ಗೋಗೇರಿಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಂದೆಯನ್ನು ನೋಡಲು ಬಾಲಕ ಬಾನಾಪುರದಿಂದ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದ.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಅಮಿತ್ ಶಾ ಗಡಿಪಾರಿಗೆ ಡಿಎಸ್ಎಸ್ ಆಗ್ರಹ
ಬಸ್ಸಿನಲ್ಲಿ ಒಟ್ಟು 15 ಜನ ಪ್ರಯಾಣ ಮಾಡುತ್ತಿದ್ದರು. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಯಲಬುರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಸ್ ಚಾಲಕ ಪರಾರಿಯಾಗಿದ್ದು, ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
