ಕೊಪ್ಪಳ | ದೂರದೃಷ್ಟಿ, ಜನಪರ ಬಜೆಟ್: ಜ್ಯೋತಿ ಗೊಂಡಬಾಳ

Date:

ಈ ಬಾರಿ ಮಂಡನೆಯಾದ 2025-26ನೇ ಸಾಲಿನ ರಾಜ್ಯ ಬಜೆಟ್‌, ಪ್ರಗತಿಪರದ ಜತೆಗೆ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.

- Advertisement -

ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು, “ಸಿದ್ದರಾಮಯ್ಯ ಅವರ 16ನೇ ದಾಖಲೆ ಬಜೆಟ್‌ನಲ್ಲಿ ಕೊಪ್ಪಳ ನಗರದಲ್ಲಿ 100 ಕೋಟಿ ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, 25 ಕೋಟಿ ವೆಚ್ಚದಲ್ಲಿ ಬೂದಗುಂಪಾ ಕುರಿ ಸಂತೆಗೆ ಮೂಲ ಸೌಕರ್ಯ ಜತೆಗೆ ನವಲಿ ಸಮಾನಾಂತರ ಜಲಾಶಯದ ಆಸೆ ಚಿಗುರಿದೆ. ಹೊಸ ಕರ್ನಾಟಕದಲ್ಲಿ ಪಬ್ಲಿಕ್ ಶಾಲೆಗಳು, ಮಕ್ಕಳಿಗೆ ಪೌಷ್ಟಿಕ ಆಹಾರ, ಪತ್ರಕರ್ತರ ಮಾಸಾಶನ, ಶಿಕ್ಷಕರ ಗೌರವಧನ ಹೆಚ್ಚಳ ಮಾಡುವುದರೊಂದಿಗೆ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಲ್ಯಾಣ ಕರ್ನಾಟಕ ಭಾಗದ ಖಾಲಿ ಇರುವ ಶಿಕ್ಷಕರ ನೇಮಕ, ಜಾನುವಾರುಗಳ ಅಕಾಲಿಕ ಮೃತ್ಯುವಿಗೆ ಪರಿಹಾರದ ಮೊತ್ತ ಹೆಚ್ಚಳ, ಅಕ್ಕ ಸಹಕಾರಿ ಬ್ಯಾಂಕ್ ಸ್ಥಾಪನೆ ಹಾಗೂ ಗೃಹಲಕ್ಷ್ಮೀ ಅದರ ವ್ಯಾಪ್ತಿಗೆ ತರುವುದು ದೊಡ್ಡ ಆರ್ಥಿಕ ಬದಲಾವಣೆಗೆ ಕಾರಣವಾಗಲಿದೆ. ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡುವುದು, ಎಸ್ಸಿಪಿ ಟಿಎಸ್‌ಪಿ ಯೋಜನೆಗೆ 42018 ಕೋಟಿ ರೂ. ಮೀಸಲು, ಬಿಸಿಯೂಟ ಕಾರ್ಯಕರ್ತರ ಗೌರವಧನವನ್ನೂ ಹೆಚ್ಚಳ ಮಾಡಿರುವುದು ಉತ್ತಮ ಕೆಲಸ” ಎಂದು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

ಕೊಪ್ಪಳದ ಬಹುತೇಕ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಒಳಗೊಂಡು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿದ್ದು ಅತ್ಯಂತ ಶ್ಲಾಘನೀಯ ಕಾರ್ಯ” ಎಂದು ಗ್ಯಾರಂಟಿ ಸಮಿತಿ ಸದಸ್ಯರೂ ಆದ ಜ್ಯೋತಿ ಗೊಂಡಬಾಳ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...