ಕೊಪ್ಪಳ | ಮತದಾರರು ಆಸೆ, ಆಮಿಷಕ್ಕೆ‌ ಬಲಿಯಾಗಬಾರದು: ನ್ಯಾ. ಸದಾನಂದ ನಾಗಪ್ಪ ನಾಯ್ಕ್

Date:

Advertisements

ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಅರ್ಹರಿಗೆ ಮತ ಚಲಾಯಿಸಬೇಕು. ಮತದಾನ ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಚಿತ್ರದುರ್ಗದ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.

ಗಂಗಾವತಿ ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದ‌ ಶ್ರೀರಾಮಭಟ್ ಜೋಷಿ ಸ್ಮಾರಕದ ರಜತ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಮತದಾರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ದೇಶದ ಏಳ್ಗೆಗೆ ಯುವ ಸಮುದಾಯದ ಪಾತ್ರ ಬಹುಮುಖ್ಯವಾಗಿದ್ದು, ಚುನಾವಣೆಗಳಲ್ಲಿ ಅಭಿವೃದ್ಧಿಗೆ ನೆರವಾಗುವ ಜನಪ್ರತಿನಿಧಿಗೆ ಯೋಚಿಸಿ ಮತ ಹಾಕಬೇಕು. ಯೋಗ್ಯರನ್ನು ಆಯ್ಕೆ ಮಾಡಿದಾಗ ಮಾತ್ರ ದೇಶ ಪ್ರಗತಿ ದಿಕ್ಕಿನಲ್ಲಿ ಸಾಗಲು ಅನುಕೂಲ ಆಗುತ್ತದೆ” ಎಂದರು.

WhatsApp Image 2025 01 25 at 9.55.22 PM

ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಗಾಣಿಗೇರ ಮಾತನಾಡಿ, “ಚುನಾವಣೆ ಎಂಬುದು ಹಬ್ಬ ಇದ್ದಂತೆ, ಪ್ರತಿಯೊಬ್ಬರೂ ಖುಷಿಯಿಂದ ಪಾಲ್ಗೊಳ್ಳಬೇಕು. ಹಣ, ಹೆಂಡಕ್ಕೆ ಮತ ಮಾರಿಕೊಳ್ಳದೇ ದೇಶದ ಅಭಿವೃದ್ಧಿಗೆ ಹಿತ ಬಯಸುವ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು” ಎಂದರು.

Advertisements

ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಮಾತನಾಡಿ, “ಮತದಾನ ಹೆಚ್ಚಳಕ್ಕೆ ಹಲವಾರು ಜಾಗೃತಿ ಕಾರ್ಯಕ್ರಮ ಮಾಡಿದರೂ ಮತದಾನ ಪ್ರಮಾಣ ನಿರೀಕ್ಷೆಯಂತೆ ಹೆಚ್ಚಳ ಆಗುತ್ತಿಲ್ಲ. ಮತದಾನದ ಬಗ್ಗೆ ಯಾರೂ ನಿಷ್ಕಾಳಜಿ ತೋರದೇ ಕಡ್ಡಾಯಾಗಿ ಹಕ್ಕು ಚಲಾಯಿಸಬೇಕು” ಎಂದು ತಿಳಿಸಿದರು. ನಂತರ ಕಾಲೇಜು ವಿದ್ಯಾರ್ಥಿಗಳಿಗೆ ಮತದಾನ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಹುಳು ತುಂಬಿರುವ ಪಡಿತರ ಅಕ್ಕಿ, ಜೋಳ ವಿತರಣೆ; ಬಡವರ ಆರೋಗ್ಯದ ಜತೆಗೆ ಆಹಾರ ಇಲಾಖೆ ಚೆಲ್ಲಾಟ

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡರ್, ನಗರಸಭೆ ವ್ಯವಸ್ಥಾಪಕ ಷಣ್ಮುಖಪ್ಪ, ಸಿಡಿಪಿಓ ಜಯಶ್ರೀ, ಗಂಗಾವತಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಬವರಾಜ ಎಂ ಎಚ್, ಶಿಕ್ಷಣ ಇಲಾಖೆ ಟಿಪಿಓ ಉಮಾದೇವಿ ಪಾಟೀಲ್, ತಹಸೀಲ್ದಾರ್ ಮಹಾಂತಗೌಡ್ರು, ಶಿರಸ್ತೇದಾರ್ ರವಿಕುಮರ್ ನಾಯಕವಾಡಿ, ಕಂದಾಯ ಇಲಾಖೆ, ನಗರಸಭೆ, ತಾಪಂ ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು, ಕಾಲೇಜು ಆಫ್ ಸಿರಿಗೇರಿ ಡೊ.ವೆಂಕೋಬ ಶೆಟ್ಟಿ ಮೆಮೋರಿಯಲ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X