ಕೊಪ್ಪಳ | ಬಿ ಆರ್‌ ಅಂಬೇಡ್ಕರ್‌ ಮೂರ್ತಿಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಬಿ ಆರ್‌ ಅಂಬೇಡ್ಕರ್‌ ಮೂರ್ತಿ ಹಾಗೂ ಅದರ ಮುಂಭಾಗದಲ್ಲಿರುವ ಪೋಸ್ಟರ್‌ಗೆ ಕಿಡಿಗೇಡಿಗಳು ಬಣ್ಣ ಸಿಡಿಸಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.

- Advertisement -

“ನಗರದ ಕೋರ್ಟ್‌ ಮುಂಭಾಗ ಇರುವ ಡಾ. ಬಿ ಆರ್ ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಿಡಿಗೇಡಿಗಳು ನಗರದಲ್ಲಿ ಕೋಮುಗಲಭೆ ಸೃಷ್ಟಿಸಲು ಹಾಗೂ ಶಾಂತಿ ಭಂಗ ತರುವುದಕ್ಕೆ ಹುನ್ನಾರ ನಡೆಸುತ್ತಿದ್ದಾರೆ. ಅವಮಾನ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಿಗಾ ವಹಿಸಬೇಕು ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು

ಈ ವೇಳೆ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಯ ಮುಖಂಡರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...