ಪೊಲೀಸ್ ಇಲಾಖೆಯಲ್ಲೇ ಭ್ರಷ್ಟಾಚಾರ ನಡೆಯುವುದು ದೊಡ್ಡ ಕಳಂಕ: ಎಡಿಜಿಪಿ ಅಲೋಕ್ ಕುಮಾರ್

Date:

ರಕ್ಷಣೆ ಮಾಡುವ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದಲ್ಲಿ ತೊಡಗಿದರೆ, ಅದು ದೊಡ್ಡ ಕಳಂಕವೆಂದು ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಹೇಳಿದ್ದಾರೆ.

ಕೊಪ್ಪಳದಲ್ಲಿ ನಡೆದ ಜಿಲ್ಲಾ ಪೊಲೀಸ್‌ ಪಥ ಸಂಚಲನದಲ್ಲಿ ಅವರು ಮಾತನಾಡಿದರು. “ಪೊಲೀಸರು ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕು‌. ಭ್ರಷ್ಟಾಚಾರದಲ್ಲಿ ತೊಡಗಬಾರದು. ರಕ್ಷಣೆ ಮಾಡುವ ಪೊಲೀಸ್ ಇಲಾಖೆಯಲ್ಲೇ ಭ್ರಷ್ಟಾಚಾರ ನಡೆದರೆ, ಅದು ದೊಡ್ಡ ಕಳಂಕ. ಬೇಗನೆ ಸಿರಿವಂತರಾಗಬೇಕು ದುರಾಸೆ ಹೊಂದಿರುವ ಪೊಲೀಸರೂ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಪೊಲೀಸರು ಮಾಡುವ ಅಪರಾಧ ಕ್ರಿಮಿನಲ್ ಪ್ರಕರಣಕ್ಕಿಂತಲೂ ದೊಡ್ಡದು” ಎಂದು ಹೇಳಿದರು.

“ತಂತ್ರಜ್ಞಾನ ಬೆಳೆದಂತೆಲ್ಲ ಅಪರಾಧಗಳ ಸ್ವರೂಪವೂ ಬದಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ದ್ವೇಷ, ಅವಹೇಳನಕಾರಿಯಾಗಿ ಪೋಸ್ಟ್‌ಗಳನ್ನು ಹಾಕುವುದರಿಂದ ಸಮಾಜದ ಶಾಂತಿಗೆ ಧಕ್ಕೆ ಉಂಟಾಗುತ್ತಿದೆ. ಅಂತಹ ಪೋಸ್ಟ್‌ಗಳ ಮೇಲೆ ತಾಲೂಕು ಹಂತದಲ್ಲೇ ನಿಗಾ ವಹಿಸಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“2022ರಲ್ಲಿ ದೇಶಾದ್ಯಂತ 1,68,391 ಮಂದಿ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ. ಪ್ರತಿ ಗಂಟೆಗೆ 30ಕ್ಕೂ ಹೆಚ್ಚು ಜನರು ಸಾಯುತ್ತಿದ್ದಾರೆ. ಅಪಘಾತಗಳ ಪ್ರಕರಣಕ್ಕೆ ಕಡಿವಾಣ ಹಾಕಲು ಕ್ರಮ ಜರುಗಿಸಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೆಮ್ಮದಿಯ ಬದುಕು ಬೇಕೋ ಬಿಜೆಪಿಯ ಸುಳ್ಳು ಬೇಕೊ ನೀವೇ ನಿರ್ಧರಿಸಿ: ಅಪ್ಪಾಜಿ ನಾಡಗೌಡ

ಮೋದಿ ಸರ್ಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್...

ಬೀದರ್ | ಕಾಂಗ್ರೆಸ್‌ ಅಭ್ಯರ್ಥಿ ಸಾಗರ್‌ ಖಂಡ್ರೆ ನಾಮಪತ್ರ ಸಲ್ಲಿಕೆ

ಅರಣ್ಯ, ಪರಿಸರ ಹಾಗೂ ಜೈವಿಕ ಖಾತೆ ಸಚಿವ, ಬೀದರ್‌ ಜಿಲ್ಲಾ ಉಸ್ತುವಾರಿ...

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...