ʻಹೊಲಗೇರಿʼ ಪದ ಬಳಸಿದ ಕಾಶಪ್ಪನವರ್ ವಜಾಗೊಳಿಸಲು ದಲಿತ ಸಂಘಟನೆಗಳ ಪಟ್ಟು

Date:

ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಈ ಹಿಂದೆ ಇಳಕಲ್ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ‘ಹೊಲಸು–ಹೊಲಗೇರಿ’ ಎಂಬ ಪದ ಬಳಸಿದ್ದಾರೆನ್ನಲಾಗಿದ್ದು, ಇದು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಕೊಪ್ಪಳದ ವಿವಿಧ ದಲಿತ ಸಂಘಟನೆಗಳ ಮುಖಂಡರು ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

- Advertisement -

ಕೊಪ್ಪಳ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋರ್ ಸೇನಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಸುರೇಶ್ ಬಳೂಟಗಿ, ಸಚಿವರು ಬಳಸಿದ್ದಾರೆನ್ನಲಾದ ಪದವನ್ನು ಹಿಂಪಡೆದು ದಲಿತ ಸಮುದಾಯದ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಚಿವರ ಕಾರ್ಯವೈಖರಿ ಕುರಿತು ಮಾತನಾಡಿದ ಅವರು, ಪತ್ರಕರ್ತರಿಗೆ ಬೆದರಿಕೆ ಹಾಕಿರುವುದು, ಪೊಲೀಸ್ ಅಧಿಕಾರಿಗಳ ಮೇಲೆ ದರ್ಪ ತೋರಿರುವುದು ಹಾಗೂ ಮಠಾಧೀಶರ ಕುರಿತು ಅವಹೇಳನಕಾರಿ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದರು. ಸಚಿವರ ವರ್ತನೆಯನ್ನು ಟೀಕಿಸಿದ ಅವರು, ‘ರೌಡಿ ಸಚಿವ’ ಹಾಗೂ ‘ಹೀನ ಮನಸ್ಥಿತಿಯ ಸಚಿವ’ ಎಂದು ಆರೋಪಿಸಿದರು. ಇಂತಹ ಆರೋಪಗಳಿರುವ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವುದು ವಿಷಾದನೀಯ ಎಂದರು.

ಮುಖಂಡ ಪ್ರಕಾಶ ಹಿರೇಮನಿ ಮಾತನಾಡಿ, ಸಚಿವರ ಹೇಳಿಕೆಯನ್ನು ಖಂಡಿಸಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲಾಗುವುದು. ಎಲ್ಲಾ ವರ್ಗ ಹಾಗೂ ಸಮುದಾಯಗಳ ಜನರು ಪಕ್ಷಭೇದ ಮರೆತು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ಕುರಿತು ಸಚಿವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಸ್ವಾಮೀಜಿಯವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಸಚಿವರು ದಲಿತ ಸಮುದಾಯದ ಜತೆಗೆ ಮಠಾಧೀಶರು, ಪೊಲೀಸ್ ಅಧಿಕಾರಿಗಳು, ರೈತರು ಹಾಗೂ ಪತ್ರಕರ್ತರ ಬಗ್ಗೆಯೂ ದೌರ್ಜನ್ಯ ಮತ್ತು ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದರು. ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಯಲಬುರ್ಗಾ ಹಾಗೂ ಕುಕನೂರು ತಾಲ್ಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು, ಯುವಕರು, ಮಹಿಳೆಯರು ಹಾಗೂ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ದಲಿತ ಮುಖಂಡ ಲಕ್ಷ್ಮಣ ಕಾಳಿ ಮಾತನಾಡಿ, ವಿಜಯಾನಂದ ಕಾಶಪ್ಪನವರ್ ಅವರು ‘ಹೊಲಗೇರಿ’ ಪದ ಬಳಸಿರುವುದು ದಲಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಇದನ್ನು ಖಂಡಿಸಿ ಕುಕನೂರಿನಲ್ಲಿ ಆ.17ರಂದು ಬೆಳಿಗ್ಗೆ 10.30ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಶಿರೂರು ವೀರಭದ್ರಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಲಾಗುವುದು. ಬಳಿಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ, ಸಚಿವರು ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಲಾಗುವುದು.

ಈ ವೇಳೆ ಶಶಿಕುಮಾರ್ ಭಜಂತ್ರಿ, ಭೀಮಣ್ಣ ಭಂಡಾರಿ, ವಿಜಯಕುಮಾರ್ ಚವಾಣ್, ರಾಘವೇಂದ್ರ ಬಳಿಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...