ಕೊಪ್ಪಳ | ಡೆಂಘೀ ಜ್ವರ: ವಿದ್ಯಾರ್ಥಿನಿ ಸಾವು

Date:

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಡೆಂಘೀ ರೋಗ ದೃಢಪಟ್ಟ ಬಳಿಕ 6 ನೇ ತರಗತಿ ಬಾಲಕಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಬಾಲಕಿ ಸುಫಿಯಾ (12) ಡೆಂಘೀಗೆ ಬಲಿಯಾದ ವಿದ್ಯಾರ್ಥಿನಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಸುಫಿಯಾ ಶರಣ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ನೇ ತರಗತಿ ವಿದ್ಯಾರ್ಥಿಯಾಗಿದ್ದಳು. ಶನಿವಾರ ಶಾಲೆಗೆ ಬಂದಾಗ ಆಕೆ ಜ್ವರದಿಂದ ಬಳಲುತ್ತಿದ್ದಳು. ಶಿಕ್ಷಕರು ಅದನ್ನು ಗಮನಿಸಿ ಪಾಲಕರಿಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಡೆಂಘೀ ಹಾವಳಿ | ರಾಜ್ಯದಲ್ಲಿ ಈ ವರ್ಷ ಗರಿಷ್ಠ ಪ್ರಕರಣ ದಾಖಲು

ಸುಫಿಯಾಳನ್ನು ಸಿಂಧನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ವೈದ್ಯರು ದೇಹದಲ್ಲಿ ರಕ್ತದ ಕಣಗಳು ಕಡಿಮೆಯಾಗಿದೆ ಎಂದು ಹೇಳಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಇತ್ತೀಚಿಗೆ ಸಿದ್ದಾಪುರ ಗ್ರಾಮದಲ್ಲಿ ಡೆಂಗ್ಯೂ ಜ್ವರದಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸಕಾಲಕ್ಕೆ ಬರುವುದಿಲ್ಲ. ಅಧಿಕಾರಿಗಳು ಯಾರೂ ಕೇಳುವವವರಿಲ್ಲ. ಸ್ಥಳೀಯವಾಗಿ ಮೆಡಿಕಲ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ ನಾಗೇಶನಹಳ್ಳಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ. ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.‌

ಕಲ್ಯಾಣ ಕರ್ನಾಟಕ | 4,904 ಅಂಗನವಾಡಿ ಕೇಂದ್ರಕ್ಕಿಲ್ಲ ಸ್ವಂತ ಕಟ್ಟಡ: ಅಡುಗೆ ಕೋಣೆ, ಶೌಚಾಲಯ ಮರೀಚಿಕೆ

ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ...

ಕೊಪ್ಪಳ | ಮಾಲಿನ್ಯದ ಕತ್ತಲು ಕಳೆಯುವ ತನಕ ಚಳವಳಿ ನಿಲ್ಲಿಸಬೇಡಿ: ಮಹಿಮಾ ಪಟೇಲ್

ನಾವು ಅನಿವಾರ್ಯ ತಪ್ಪು ಮಾಡುವವರ ವ್ಯವಸ್ಥೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದೇವೆ. ಅಂತಹ ಆಡಳಿತಗಾರರನ್ನು...

ಕೊಪ್ಪಳ | ಮದ್ಯಪಾನ ಮುಕ್ತ ಮಾದಿನೂರು ಗ್ರಾಮಕ್ಕೆ ಮಹಿಳೆಯರ ಮನವಿ

ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ತೀವ್ರ...