ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

Date:

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.

- Advertisement -

ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುವ ಗವಿಸಿದ್ದೇಶ್ವರ ಜಾತ್ರೆಗೆ ನಾನಾ ಕಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ ಪತ್ರ ನೀಡಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದ್ದು, ಅವರು ಈ ವರ್ಷದ ಜಾತ್ರೆಗೆ ಮುಖ್ಯ ಅತಿಥಿಯಾಗಿ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಂದೊಮ್ಮೆ ಅಮಿತಾಭ್ ಬಚ್ಚನ್ ಜಾತ್ರೆಗೆ ಆಗಮಿಸಿದರೆ ಜಾತ್ರೆಯ ಮೆರಗು ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರಮಟ್ಟದಲ್ಲೂ ಇದು ಸುದ್ದಿ ಆಗಲಿದೆ.

ಪ್ರತಿವರ್ಷವು ಜಾತ್ರೆಯಲ್ಲಿ ಸಮಾಜಿಕ ಅರಿವು ಮೂಡಿಸಿ ಜನರನ್ನು ಜಾಗೃತಗೊಳಿಸುವ ವಿಶಿಷ್ಟ ಕಾರ್ಯಕ್ರಮ ನೆಡೆಯುತ್ತದೆ. ಈವರೆಗೂ ಬಾಲ್ಯವಿವಾಹ ತಡೆ, ವಿಕಲಚೇತನರಿಗೆ ಕಂಕಣ ಭಾಗ್ಯ, ಜಲದೀಕ್ಷೆ, ಸಶಕ್ತ ಮನ – ಸಂತ್ರಪ್ತ ಜೀವನ, ಕೃಪಾದೃಷ್ಠಿ – ನೇತ್ರದಾನ ಜಾಗೃತಿ, ಲಕ್ಷ ವೃಕ್ಷೋತ್ಸವ, ಸರಳ ಜಾತ್ರೆ – ಸಮಾಜಮುಖಿ ಜಾತ್ರೆ, ಅಡವಿಹಳ್ಳಿ ಗ್ರಾಮ ದತ್ತು, ಕ್ಯಾನ್ಸರ್ ರೋಗ ತಪಾಸಣೆ, ಗಿಣಗೇರಿ ಕೆರೆ ಹೂಳೆತ್ತುವುದು ಹಾಗೂ ಅಂಗಾಂಗ ದಾನ ಜಾಗೃತಿ ಕಾರ್ಯಕ್ರಮಗಳು ನಡೆದಿವೆ.

ಅಮಿತಾಬ್‌
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...

2047ರ ವೇಳೆಗೆ ರಾಜ್ಯದ ನಗರ ಜನಸಂಖ್ಯೆ 70%ಗೆ ಏರಿಕೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕದ ನಗರ ಪ್ರದೇಶಗಳ ಜನಸಂಖ್ಯೆಯು ಪ್ರಸ್ತುತ 46% ಇದ್ದು, 2047ರ ವೇಳೆಗೆ...