ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

Date:

ವರ್ಷ ಪೂರ್ತಿ ಕಷ್ಟ ಪಟ್ಟು ಓದಿದ ವಿದ್ಯಾರ್ಥಿ, ಇನ್ನೇನು ವಾರ್ಷಿಕ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ಹೆತ್ತ ತಾಯಿ ನಿಧನರಾದರೆ ಪಾಪಾ ಆ ಹುಡುಗನ ಪರಿಸ್ಥಿತಿ ಹೇಗಾಗಬೇಡ? ಸುಮ್ಮನೇ ಊಹಿಸಿಕೊಂಡರೆ ಕರುಳು ಕಿವುಚುತ್ತೆ. ಆದರೆ ಇಂತಹ ಘಟನೆ ರಾಜ್ಯದಲ್ಲಿ ಇಂದು ನಡೆದಿದೆ.

- Advertisement -

ಶುಕ್ರವಾರ (ಮಾ.21) ಗಂಗಾವತಿಯಲ್ಲಿ ಈ ನೈಜ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇಂದು ಆರಂಭವಾಗಿದ್ದು, ಬೆಳಿಗ್ಗೆ ಎದ್ದ ಹುಡುಗ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ತಾಯಿ ನಿಧನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆಸರಹಟ್ಟಿ ಗ್ರಾಮದ ಈ ಘಟನೆ ನಡೆದಿದೆ. ತಮ್ಮ ತಾಯಿ ಮೃತಪಟ್ಟ ದುಃಖದ ನಡುವೆಯೂ ಅಡಿವೆಯ್ಯಸ್ವಾಮಿ ಹಿರೇಮಠ ಎಂಬ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದಾನೆ. ಶೈಕ್ಷಣಿಕ ಜೀವನಕ್ಕೆ ಮಹತ್ವ ನೀಡಿ, ಮಾದರಿಯಾಗಿದ್ದಾನೆ.

ಅಡಿವೆಯ್ಯಸ್ವಾಮಿ ಕೆಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾಯಿ ನಿಧನದ ಸುದ್ದಿಯ ನೋವಿನ ನಡುವೆಯೂ ಶಿಕ್ಷಕರು, ವಿದ್ಯಾರ್ಥಿ ಮತ್ತು ಅವರ ಕುಟುಂಬ ಸದಸ್ಯರ ಮನವೊಲಿಸಿ ವಿದ್ಯಾರ್ಥಿಯ ಪರೀಕ್ಷೆ ಬರೆಯಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿ ತಾಯಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.

ಕೆಲ ದಿನಗಳ ಹಿಂದೆ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ ಅವರು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ರಕ್ತ ಹೆಪ್ಪುಗಟ್ಟಿದ್ದರಿಂದ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Breaking News | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ: ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ವಿಶ್ವಪ್ರಸಿದ್ಧ ಹಂಪಿ ಸಮೀಪದ ಧನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಮಹಿಳೆಯ...

ಕೊಪ್ಪಳ | ಲಾರಿ ಡಿಕ್ಕಿ; ಪ್ರೀ ವೆಡ್ಡಿಂಗ್ ಶೂಟ್ ಗೆ ತೆರಳಿದ್ದ ಜೋಡಿ ಸಾವು

ಲಾರಿ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದ ಪರಿಣಾಮ ನವಜೋಡಿ ಸಾವನ್ನಪ್ಪಿರುವ...

ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಗಂಗಾವತಿ ತಾಲೂಕಿನ ದಾಸನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ...

ಕೊಪ್ಪಳ | ಕುಡಿಯುವ ನೀರಿಗಾಗಿ ಪರದಾಟ; ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಆಗ್ರಹ

ಕೊಪ್ಪಳದ ಗಂಗಾವತಿ ನಗರದ ಹಲವು ಓಣಿಗಳಲ್ಲಿ ಕಳೆದ 3-4 ದಿನದಿಂದ‌ ಕುಡಿಯುವ...