ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಿಂದ ಜುಲೈ 25 ಮತ್ತು 26ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿನ ಪೂಜ್ಯಶ್ರೀ ಶಿವಯೋಗಿ ಶಂಕರಲಿಂಗ ಪ್ರಧಾನ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದೆ.
ಶೇಖರಗೌಡ ಮಾಲಿಪಾಟೀಲ ಅವರು ಕೊಪ್ಪಳ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಇವರು ಕುಷ್ಟಗಿ ತಾಲೂಕಿನ ಗುಮಗೇರ ಗ್ರಾಮದವರಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ, 2 ಮನೆಗಳಿಗೆ ಭಾಗಶಃ ಹಾನಿ
ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸ ರಾಜಶೇಖರ ಹಿಟ್ನಾಳ, ಕುಷ್ಟಗಿ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ, ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೇಗೌಡ ಪೊಲೀಸ ಪಾಟೀಲ್, ಕುಷ್ಟಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲೆಂಕಪ್ಪ ವಾಲಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ ಎ ದಯಾನಂದ ಅವರು ಪಾಲ್ಗೊಳ್ಳಲಿದ್ದಾರೆ.





