ಕೊಪ್ಪಳ | ನಿಯಮ ಉಲ್ಲಂಘನೆ, ಲೈಸೆನ್ಸ್ ಇಲ್ಲದ 9 ರೆಸಾರ್ಟ್‌ಗಳಿಗೆ ಬೀಗ

Date:

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳ ಉಲ್ಲಂಘನೆ ಹಾಗೂ ಲೈಸೆನ್ಸ್ ಪಡೆಯದೆ ರೆಸಾರ್ಟ್‌ಗಳನ್ನು ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ 9 ಅನಧಿಕೃತ ರೆಸಾರ್ಟ್‌ಗಳಿಗೆ ಬೀಗ ಹಾಕಲು ಜಿಲ್ಲಾಡಳಿತ ಆದೇಶಿಸಿದೆ.

- Advertisement -

ಕೆಲವು ತಿಂಗಳುಗಳ ಹಿಂದೆ ಉಪಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಜಿಲ್ಲೆಯಲ್ಲಿರುವ ಅಕ್ರಮ ರೆಸಾರ್ಟ್‌ಗಳ ಬಗ್ಗೆ ಮಾಹಿತಿ ದಾಖಲಿಸಿಕೊಂಡು ಪರಿಶೀಲನೆ ನಡೆಸುವಂತೆ ಕೊಪ್ಪಳದ ಸಹಾಯಕ ಪರಿಸರ ಅಧಿಕಾರಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ರೆಸಾರ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸುತ್ತಿರುವುದು ಸಾಬೀತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೊಪ್ಪಳದ ಹೊಳೆ ಮುದ್ಲಾಪುರ ಗ್ರಾಮದ ಒಟ್ಟೇರ್ಸ್ ಕೆಫೆ, ಗಂಗಾವತಿ ತಾಲೂಕಿನ ತಿರುಮಲಾಪುರ ಗ್ರಾಮದ ಫುಲ್ ಮೂನ್, ಹನುಮನಹಳ್ಳಿ ಗ್ರಾಮದ ಸುಗ್ರೀವಾ ಕಿಂಗ್ಡಮ್, ಗ್ರೀನ್ ಸ್ಟೋನ್, ಹಂಪಿ ಡೆಲ್ಮಾಂಟ್ ರೆಸಾರ್ಟ್, ತ್ರೀ ಸೀಸನ್ ರೆಸಾರ್ಟ್, ಹಂಪಿ ಹಾರ್ಟ್ ಲ್ಯಾಂಡ್ ರೆಸಾರ್ಟ್, ರಂಗಾಪುರ ಗ್ರಾಮದ ವಿಸ್ಟರಿಂಗ್ ರಾಕ್ಸ್ ಮತ್ತು ರಾಜಪುರ ಗ್ರಾಮದ ಗೋಯನ್ ಕಾರ್ನರ್ ರೆಸಾರ್ಟ್‌ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

ಕೊಪ್ಪಳ ಸಹಾಯಕ ಪರಿಸರ ಅಧಿಕಾರಿ, ಉಪವಿಭಾಗಾಧಿಕಾರಿ ಮೆಹಬೂಬ್ ಅಲಿ, ಗಂಗಾವತಿ ತಹಶೀಲ್ದಾರ್ ವಸಂತಕುಮಾರಿ ಹಾಗೂ ಪೊಲೀಸ್ ಅಧಿಕಾರಿಗಳು ತೆರಳಿ ರೆಸಾರ್ಟ್‌ಗಳಿಗೆ ಬೀಗ ಹಾಕುವಂತೆ ಆದೇಶಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, “ಪ್ರವಾಸಿಗರು ತಂಗಿರುವ ಕಾರಣ ರೆಸಾರ್ಟ್ ಮಾಲೀಕರು ಎರಡು ದಿನ ಸಮಯ ಕೇಳಿದ್ದಾರೆ. ಆ ಬಳಿಕ ನಿಯಮ ಬಾಹಿರ ರೆಸಾರ್ಟ್‌ಗಳನ್ನು ಮುಚ್ಚಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ...