ಕೊಪ್ಪಳ | 70 ವರ್ಷಗಳ ಬಳಿಕ ಟಿಬಿ ಡ್ಯಾಂಗೆ ಹೊಸ ಗೇಟಿನ ಭಾಗ್ಯ

Date:

ಬರೋಬ್ಬರಿ 70 ವರ್ಷಗಳ ಬಳಿಕ ಟಿಬಿ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್‌ ಅಳವಡಿಸಲಾಗಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮೂರು ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು.

- Advertisement -

ಕೊಪ್ಪಳಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಒಂದೇ ವಾಹನದಲ್ಲಿ ಡ್ಯಾಮ್‌ಗೆ ತೆರಳಿ ಸಂಚಲನ ಸೃಷ್ಟಿಸಿದರು. ಕ್ರಸ್ಟ್ ಗೇಟ್ ದ್ವಾರದಿಂದ ಕೇಂದ್ರ ಜಲಸಂಪನ್ಮೂಲ ಸಚಿವ ಸಿ. ಆರ್ ಪಾಟೀಲ್ ಜೊತೆಗೂಡಿ ವಿಶೇಷ ಬ್ಯಾಟರಿ ವಾಹನದ ಮೂಲಕ ತೆರಳಿ ಗೇಟ್‌ಗಳ ಉದ್ಘಾಟನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
WhatsApp Image 2026 06 25 at 5.21.53 PM 1

2024ರಲ್ಲಿ ಕೊಚ್ಚಿ ಹೋಗಿದ್ದ 19ನೇ ಕ್ರಸ್ಟ್ ಗೇಟ್
2024ರ ಆಗಸ್ಟ್‌ನಲ್ಲಿ ತುಂಗಭದ್ರಾ ಡ್ಯಾಂನ 19ನೇ ಕ್ರೆಸ್ಟ್ ಗೇಟ್ ಕೊಚ್ಚಿ ಹೋಗಿದ್ದ ಘಟನೆ ದೇಶದ ಗಮನ ಸೆಳೆದಿತ್ತು. ಬಳಿಕ ಡ್ಯಾಂ ಸುರಕ್ಷತಾ ತಂಡ ಮತ್ತು ಕೇಂದ್ರ ಜಲಶಕ್ತಿ ಆಯೋಗ ಪರಿಶೀಲನೆ ನಡೆಸಿ, ಒಟ್ಟು 33 ಗೇಟ್‌ಗಳನ್ನು ಬದಲಾಯಿಸಲು ಸೂಚಿಸಿತ್ತು. ಅದರಂತೆ ಸುಮಾರು 51 ಕೋಟಿ ರೂ. ವೆಚ್ಚದಲ್ಲಿ ಹೊಸ ಗೇಟ್‌ಗಳನ್ನು ಅಳವಡಿಸಲಾಗಿದೆ. 1953ರಲ್ಲಿ ಅಳವಡಿಸಲಾಗಿದ್ದ ಹಳೆಯ ಗೇಟ್‌ಗಳು ಸವಕಲಾಗಿದ್ದವು. ಪ್ರತಿಯೊಂದು ಗೇಟ್ 20 ಅಡಿ ಎತ್ತರ, 60 ಅಡಿ ಅಗಲ ಹಾಗೂ 48.50 ಟನ್ ತೂಕ ಹೊಂದಿದೆ.

51 ಕೋಟಿ ರೂ. ವೆಚ್ಚದಲ್ಲಿ ಗೇಟ್‌ಗಳ ಅಳವಡಿಕೆ
ಕ್ರಸ್ಟ್ ಗೇಟ್‌ಗಳು ಹಾಗೂ ಚೈನ್ ಸೇರಿದಂತೆ ಅಳವಡಿಕೆ ಕಾಮಗಾರಿಗೆ ಸುಮಾರು 51 ಕೋಟಿ ರೂಪಾಯಿ ವೆಚ್ಚವಾಗಿದೆ. ಇದರಲ್ಲಿ ಶೇ.64ರಷ್ಟು ಅಂದರೆ 32.64 ಕೋಟಿ ರೂಪಾಯಿ ಪಾಲು ಕರ್ನಾಟಕ ಸರ್ಕಾರದ್ದಾಗಿದ್ದು, ಉಳಿದ ವೆಚ್ಚವನ್ನು ಅಂದರೆ 17.85 ಕೋಟಿ ರೂಪಾಯಿಗಳನ್ನು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ಭರಿಸಲಿವೆ. ಕ್ರಸ್ಟ್ ಗೇಟ್‌ಗಳ ಅಳವಡಿಕೆ ರೈತರಲ್ಲಿ ಹೊಸ ಭರವಸೆ ಹುಟ್ಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...