ಕೊಪ್ಪಳ | ʻಸಂಸತ್‌ ಚಲೋʼ ನಿರತರ ಮೇಲಿನ ಲಾಠಿಚಾರ್ಜ್‌ ಖಂಡಿಸಿ ಎಐಡಿಎಸ್ಓ ಪ್ರತಿಭಟನೆ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿಚಾರ್ಜ್‌ ಖಂಡಿಸಿ, ಕೇಂದ್ರ ಸರ್ಕಾರದ ಅಪ್ರಜಾತಾಂತ್ರಿಕ ಮತ್ತು ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಕೊಪ್ಪಳದಲ್ಲಿ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ʻಸಂಸತ್ ಚಲೋʼ ಹೊರಟಿದ್ದ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿಚಾರ್ಜ್‌ ಅತ್ಯಂತ ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಎಐಡಿಎಸ್ಓ ರಾಜ್ಯ ಮುಖಂಡರಾದ ಸಿಂಧು ಕೌದಿ ಮಾತನಾಡಿ, “ನೀಟ್ ಪರೀಕ್ಷೆಯಲ್ಲಿನ ಅಕ್ರಮ ನಡೆದಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ದೇಶದ ಎಲ್ಲಾ ಶಿಕ್ಷಣ ಪ್ರೇಮಿಗಳು ಈ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ನೀಟ್ ಅಕ್ರಮದಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿದ್ದಾರೆ. ಇದು ವಿದ್ಯಾರ್ಥಿ ಸಮುದಾಯ ಮತ್ತು ಅವರ ಪೋಷಕರಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಯುವಜನ ಹೋರಾಟಗಾರರಾದ ಮಲಪ್ಪ, ಕಾಲೇಜಿನ ವಿದ್ಯಾರ್ಥಿಗಳಾದ ಆನಂದ್ ಗೌಡ, ಎಂ.ಡಿ. ಶಾಹಿದ್, ಯಮನೂರ್, ನವಾಜ್, ಸುಬ್ರಮಣ್ಯ, ಈರಣ್ಣ, ಮುತ್ತು, ಅಕಾಶ, ಪ್ರವೀಣ್, ಸುನೀಲ್, ಮಂಜುನಾಥ್, ಪರಶುರಾಮ್, ಉಮರ್ ಫಾರೂಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...