ಕೊಪ್ಪಳ | ನರೇಗಾ ಕಾರ್ಮಿಕರಿಗೆ ಮಕ್ಕಳ ಕಾಯ್ದೆಗಳ ಕುರಿತು ಅರಿವು

Date:

ಕೊಪ್ಪಳ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಇತ್ತೀಚೆಗೆ ಕದ್ರಳ್ಳಿ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮದ ಮೂಲಕ ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಮಕ್ಕಳ ಸುರಕ್ಷತೆ ಕುರಿತು ನರೇಗಾ ಕೂಲಿ ಕಾರ್ಮಿಕರಿಗೆ ಅರಿವು ಮೂಡಿಸಲಾಯಿತು.

ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಾಂಸ್ಥಿಕ) ರವಿ ಬಡಿಗೇರ ಮಾತನಾಡಿ ಪೋಷಕತ್ವ ಯೋಜನೆಯ ಕುರಿತು ಮಾಹಿತಿ ನೀಡಿದರು.

“ಪೋಷಕತ್ವ ಯೊಜನೆಗೆ ಅರ್ಹರು ಅರ್ಜಿ ಸಲ್ಲಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಮಕ್ಕಳ ನ್ಯಾಯ ಕಾಯ್ದೆ-2015 ಸೆಕ್ಷನ್ 44 ರನ್ವಯ ಪೋಷಕತ್ವ ಯೋಜನೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ಹೋಗಲು ಸಾಧ್ಯವಾಗದಿರುವ (ಅನಾಥ) ಜೈವಿಕ ಪೋಷಕರಿಂದ ಬೇರ್ಪಟ್ಟ ಮಕ್ಕಳು, ಮಾರಣಾಂತಿಕ ಖಾಯಿಲೆಯಿಂದ ಬಳತ್ತಿರುವ ಪೋಷಕರ ಮಕ್ಕಳು, ಸುಮಾರು 6 ತಿಂಗಳಿಂದ 1 ವರ್ಷದವರೆಗೆ ಮಗುವಿನೊಂದಿಗೆ ಕುಟುಂಬದ ಯಾವಿಬ್ಬ ಸದಸ್ಯರು ಸಂಪರ್ಕಕ್ಕೆ ಬಾರದೇ ಇರುವಂತಹ ಮಕ್ಕಳು, ಕೌಟುಂಬಿಕ ಪ್ರೀತಿಯಿಂದ ವಂಚಿತವಾದ ಮಕ್ಕಳಿಗೆ ಪರ್ಯಾಯ ಕುಟುಂಬ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಹೆತ್ತವರ ಪ್ರೀತಿಯನ್ನು ನೀಡುವ ಅತ್ಯುತ್ತಮ ಯೋಜನೆಯಾಗಿದೆ” ಎಂದು ಮಾಹಿತಿ ನೀಡಿದರು.

“ತಂದೆ-ತಾಯಿಯ ಪ್ರೀತಿಯಿಂದ ವಂಚಿತವಾದ ಮಕ್ಕಳಿಗೆ ಕೌಟುಂಬಿಕ ಪ್ರೀತಿಯನ್ನು ನೀಡಿ ಮಗುವಿಗೆ ಉತ್ತಮ ಭವಿಷ್ಯವನ್ನು ರೂಪಿಸುವ ಇಚ್ಛೆಯನ್ನು ಹೊಂದಿರುವ ಯಾವುದೇ ಪೋಷಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಅರ್ಜಿ ಸಲ್ಲಿಸಬಹುದಾಗಿದೆ” ಎಂದು ತಿಳಿಸಿದರು.

ಅಲ್ಲದೇ, ಮಕ್ಕಳ ನಾಲ್ಕು ಮುಖ್ಯ ಹಕ್ಕುಗಳಾದ ಬದುಕುವ, ರಕ್ಷಣೆಯ, ವಿಕಾಸ ಹೊಂದುವ ಹಾಗೂ ಭಾಗವಹಿಸುವ ಹಕ್ಕುಗಳು ಮತ್ತು ಬಾಲ್ಯವಿವಾಹ ಕಾಯ್ದೆ-2006 ಹಾಗೂ ಪೊಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಮಕ್ಕಳ ಸಹಾಯವಾಣಿ-1098 ಕೊಪ್ಪಳದ ವಿಷಯ ನಿರ್ವಾಹಕ ರಾಘವೇಂದ್ರ ಕುಲಕರ್ಣಿ ಅವರು ಮಾತನಾಡಿ, “ಮಕ್ಕಳು ಬಾಲಕಾರ್ಮಿಕತೆಯಲ್ಲಿ ತೊಡಗಿದ್ದರೆ, 18 ವರ್ಷದೊಳಗಿನ ಹೆಣ್ಣು ಮತ್ತು 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ಮಾಡಿದರೆ ಅದು ಬಾಲ್ಯವಿವಾಹ ಆಗುತ್ತದೆ. ಬಾಲ್ಯವಿವಾಹ ಮಾಡುವುದು ಅಥವಾ ಪೂರ್ವ ತಯಾರಿ ಮಾಡುವಲ್ಲಿ ಭಾಗಿಯಾಗುವುದು ಅಪರಾಧ” ಎಂದು ಎಚ್ಚರಿಸಿದರು.

“ಮಕ್ಕಳು ಭಿಕ್ಷೆ ಬೇಡುತ್ತಿದ್ದರೆ, ಮಕ್ಕಳನ್ನು ಎಲ್ಲಂದರಲ್ಲಿ ಬಿಸಾಕಿ ಹೋದರೆ, ಚಿಂದಿ ಆಯುತ್ತಿರುವ ಮಕ್ಕಳಿದ್ದರೆ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಕಂಡು ಬಂದರೆ ಮತ್ತು ಆರೈಕೆ ಪೋಷಣೆ ಅವಶ್ಯಕತೆಯಿರುವ ಮಕ್ಕಳು ಕಂಡು ಬಂದರೆ ಮಕ್ಕಳ ಸಹಾಯವಾಣಿ-1098ಕ್ಕೆ ಕರೆ ಮಾಡಿದಲ್ಲಿ 24 ಗಂಟೆಯೊಳಗೆ ಸ್ಥಳಕ್ಕೆ ಧಾವಿಸಿ ಮಕ್ಕಳ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸಲಾಗುವುದು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯೋಗ ಖಾತ್ರಿ ಮೇಟ್ ವಿಜಯ ಅವರು ವಹಿಸಿದ್ದರು. ಮಂಜುನಾಥ ಬಿ.ಎಫ್.ಟಿ ಅವರು ಕಾರ್ಯಕ್ರಮ ನಿರೂಪಿಸಿ ನೆರವೇರಿಸಿದರು. ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...