ಕೊಪ್ಪಳ | ಪೋಕ್ಸೊ ತಡೆಗೆ ಶಾಲೆಗಳಲ್ಲಿ ಗೈರುಹಾಜರಿ ಪರಿಶೀಲಿಸಿ: ನ್ಯಾ. ಮಧು ಎನ್.ಆರ್

Date:

ಪ್ರತಿ ಶಾಲೆಯಲ್ಲೂ ಯಾವುದೇ ಮಗು ಮೂರು ದಿನಕ್ಕಿಂತ ಹೆಚ್ಚು ಗೈರು ಹಾಜರಾದರೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಕಾರಣ ತಿಳಿಯಬೇಕು. ಇದು ಬಾಲ್ಯವಿವಾಹ, ಬಾಲಕಾರ್ಮಿಕ ಮತ್ತು ಪೋಕ್ಸೊ ಪ್ರಕರಣಗಳನ್ನು ಪತ್ತೆಹಚ್ಚಲು ಸಹಾಯಕವಾಗುತ್ತದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಎಫ್‌ಟಿಎಸ್‌ಸಿ-1 ಪೋಕ್ಸೊ ನ್ಯಾಯಾಧೀಶರಾದ ಮಧು ಎನ್.ಆರ್ ಸೂಚಿಸಿದರು.

- Advertisement -

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ್ವೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಪೋಕ್ಸೊ ಪ್ರಕರಣಗಳಲ್ಲಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಜರ್ಜರಿತಗೊಂಡ ಬಾಲಕಿಗೆ ಮಾನಸಿಕ ಸ್ಥೈರ್ಯ, ಕಾನೂನು ನೆರವು ಹಾಗೂ ವೈದ್ಯಕೀಯ ನೆರವು ನೀಡುವುದು ನಮ್ಮೆಲ್ಲರ ಜವಾಬ್ದಾರಿ. ಸಂತ್ರಸ್ತೆಗೆ ನ್ಯಾಯ ಒದಗಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಕ್ಕಳ ರಕ್ಷಣೆ ಮತ್ತು ಸರ್ವತೋಮುಖ ಅಭಿವೃದ್ಧಿ ನಮ್ಮೆಲ್ಲರ ಜವಾಬ್ದಾರಿ. ಪೋಕ್ಸೊ ಪ್ರಕರಣಗಳಲ್ಲಿ ಬಾಲಕಿಗೆ ವೈದ್ಯಕೀಯ ನೆರವು ಮತ್ತು ಕೌನ್ಸೆಲಿಂಗ್ ಅತ್ಯಗತ್ಯ. ಪ್ರಕರಣ ದಾಖಲಾದ ನಂತರ ನ್ಯಾಯಾಲಯ, ಪೊಲೀಸ್ ಠಾಣೆ, ಆಸ್ಪತ್ರೆಗಳಿಗೆ ಹೋಗಿ ನೆರವು ಪಡೆಯುವ ಬಗ್ಗೆ ಬಾಲಕಿ ಮತ್ತು ಪೋಷಕರಿಗೆ ಸಾಕಷ್ಟು ಮಾಹಿತಿ ಇರುವುದಿಲ್ಲ. ಆದ್ದರಿಂದ ನ್ಯಾಯಾಲಯವು ಬೆಂಬಲಿಗ ವ್ಯಕ್ತಿಗಳನ್ನು ನೇಮಿಸುತ್ತದೆ. ಆದರೆ ಈ ವ್ಯವಸ್ಥೆಯ ಬಗ್ಗೆ ಅನೇಕರಿಗೆ ತಿಳಿದಿರುವುದಿಲ್ಲ. ಆದ್ದರಿಂದ ಶಾಲೆ, ಕಾಲೇಜುಗಳು ಮತ್ತು ಸಾಮುದಾಯಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

“ಸಂತ್ರಸ್ತ ಮಗುವನ್ನು ನಮ್ಮ ಮನೆಯ ಮಗು ಎಂದು ಭಾವಿಸಿ ರಕ್ಷಣೆ ಮತ್ತು ನೆರವಿಗೆ ನಿಲ್ಲಬೇಕು. ಅಪ್ರಾಪ್ತರ ಹೆಸರು ಅಥವಾ ಗುರುತು ಬಹಿರಂಗಪಡಿಸುವುದು ಕಾನೂನುಬಾಹಿರ. ಮಗುವಿನ ಗುರುತನ್ನು ಬಹಿರಂಗಪಡಿಸಬಾರದು”. ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಪೋಕ್ಸೊ ಕಾಯಿದೆ, ಶಿಕ್ಷೆಗಳು ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಕೌನ್ಸೆಲಿಂಗ್ ಮೂಲಕ ಬಾಲಕಿಗೆ ಮಾನಸಿಕ ಸ್ಥೈರ್ಯ ತುಂಬಿ ಆಘಾತದಿಂದ ಹೊರಬರಲು ನೆರವಾಗಬೇಕು. ವಿವಿಧ ಇಲಾಖೆಗಳಿಂದ ದೊರೆಯುವ ನೆರವಿನ ಬಗ್ಗೆ ತಿಳಿಸಬೇಕು. ಬಾಲಕಿ ಗರ್ಭಿಣಿಯಾಗಿದ್ದರೆ ಅವಳ ನಿರ್ಧಾರವನ್ನು ಗೌರವಿಸಿ, ಎಲ್ಲಾ ಪ್ರಕ್ರಿಯೆಗಳನ್ನು ವೇಗವಾಗಿ ನಡೆಸಬೇಕು. ಅನಗತ್ಯ ವಿಳಂಬ ಮಾಡಬಾರದು ಎಂದು ಎಚ್ಚರಿಸಿದರು.

ನ್ಯಾಯಾಲಯಕ್ಕೆ ಸಲ್ಲಿಸುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸಲ್ಲಿಸಬೇಕು. ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ವೈದ್ಯರಿಗೆ ಸೂಕ್ತ ತರಬೇತಿ ನೀಡಬೇಕು. ವೈದ್ಯಕೀಯ ಪರೀಕ್ಷೆ ಕುರಿತ ಗೊಂದಲವನ್ನು ಪರಿಹರಿಸಬೇಕು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ್ ಅವರು ನಾಲ್ಸಾ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹಮ್ಮದ್ ಜೀಲಾನಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ್, ಡಿಎಚ್‌ಒ ಡಾ. ಈಶ್ವರ ಸವಡಿ, ಆರ್‌ಸಿಎಚ್‌ಒ ಡಾ. ಪ್ರಕಾಶ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಕಾಶ ಆನಂದಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...