ಕೊಪ್ಪಳ | ತುಂಗಭದ್ರಾ ಕಾಲುವೆಗಳಿಗೆ 90 ದಿನ ನೀರು ಹರಿಸಲು ನಿರ್ಧಾರ: ರೈತರ ಮೊಗದಲ್ಲಿ ಮಂದಹಾಸ

Date:

ಕೃಷಿ ಚಟುವಟಿಕೆಗಳಿಗೆ ತುಂಗಭದ್ರಾ ಜಲಾಶಯದಿಂದ ನೀರು ಸಿಗದೆ ಕಂಗಾಲಾಗಿದ್ದ ರೈತರಿಗೆ ಕೊನೆಗೂ ಭರವಸೆಯ ಕಿರಣ ಮೂಡಿದೆ. ಕೃಷಿ ಚಟುವಟಿಕೆಗಳಿಗಾಗಿ ತುಂಗಭದ್ರಾ ಕಾಲುವೆಗೆ ನೀರು ಬಿಡುಗಡೆ ಮಾಡಲು ಅಧಿಕೃತ ಚಾಲನೆ ದೊರೆತಿದ್ದು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆದ 126ನೇ ನೀರಾವರಿ ಸಲಹಾ ಸಮಿತಿ ಸಭೆಯು, ರೈತರ ಪಾಲಿಗೆ ಅತ್ಯಂತ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ.

- Advertisement -

ಪ್ರಸ್ತುತ ತುಂಗಭದ್ರಾ ಜಲಾಶಯದಲ್ಲಿ 82 ಟಿಎಂಸಿ ನೀರು ಸಂಗ್ರಹವಿದ್ದು, ಮುಂದಿನ ದಿನಗಳಲ್ಲಿ ಸುಮಾರು 16 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬರುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ. ನೀರಾವರಿ ಸಲಹಾ ಸಮಿತಿ ಸಭೆಯು, ರೈತರ ಪಾಲಿಗೆ ಅತ್ಯಂತ ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ 90 ದಿನಗಳ ಕಾಲ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕಾಲುವೆಗಳಿಗೆ ನೀರು ಪೂರೈಕೆಯ ವಿವರ:

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಆಗಸ್ಟ್ 11ರಿಂದ ನವೆಂಬರ್ 10ರವರೆಗೆ ದಿನಕ್ಕೆ 4100 ಕ್ಯುಸೆಕ್‌ನಂತೆ ನೀರು ಹರಿಸಲಾಗುವುದು.
ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಆ. 11ರಿಂದ ನವೆಂಬರ್ 10ರವರೆಗೆ ದಿನಕ್ಕೆ 1200 ಕ್ಯುಸೆಕ್‌ನಂತೆ ನೀರು ಪೂರೈಕೆ.
ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಆ. 11ರಿಂದ ನ. 10ರವರೆಗೆ ದಿನಕ್ಕೆ 650 ಕ್ಯುಸೆಕ್‌ನಂತೆ ನೀರು ಬಿಡುಗಡೆ.
ರಾಯ ಬಸವಣ್ಣ ಕಾಲುವೆಗೆ 01.01.2026 ರಿಂದ ಡಿಸೆಂಬರ್ 10 ರವರೆಗೆ ಸರಾಸರಿ 180 ಕ್ಯುಸೆಕ್‌ನಂತೆ ನೀರು ಒದಗಿಸಲಾಗುವುದು.
ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಆ. 11ರಿಂದ ನವೆಂಬರ್ 10 ರವರೆಗೆ ದಿನಕ್ಕೆ 25 ಕ್ಯುಸೆಕ್‌ನಂತೆ(ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ಮಾತ್ರ) ನೀರು ಬಿಡಲಾಗುವುದು.
ನದಿ ಪೂರಕ (ಕೆರೆಗಳಿಗೆ) ಆ. 11 ರಿಂದ ಆ. 17 ರವರೆಗೆ ನೀರು ಒದಗಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ ಕಾಳಗಿ ಬಂದ್‌: ರೈತರ ಬೃಹತ್ ಪ್ರತಿಭಟನೆ

ಈ ಎಲ್ಲ ಕಾಲುವೆಗಳಲ್ಲಿ ನೀರಿನ ಲಭ್ಯತೆ ಇರುವವರೆಗೆ ಅಥವಾ ನಿಗದಿಪಡಿಸಿದ ದಿನಾಂಕದವರೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇವೆರಡರಲ್ಲಿ ಯಾವುದು ಮೊದಲೋ ಅದು ಅನ್ವಯಿಸುತ್ತದೆ. ಮುಂದೆ ಬರುವ ಒಳಹರಿವಿನ ವ್ಯತ್ಯಾಸಕ್ಕೆ (ಹೆಚ್ಚು ಅಥವಾ ಕಡಿಮೆ) ಅನುಗುಣವಾಗಿ, ಸೆಪ್ಟೆಂಬರ್ 10ರಂದು ಮತ್ತೆ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು 126ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಸದ್ಯ ನೀರು ಹರಿಸುವ ನಿರ್ಧಾರ ಕೇಳಿ ಆತಂಕದಲ್ಲಿದ್ದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...