ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

Date:

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ಎಸ್. ಹೆಚ್. ಅವರನ್ನು 15ನೇ ಹಣಕಾಸು ಯೋಜನೆಯ ಅನುದಾನ ದುರುಪಯೋಗ ಹಾಗೂ ಸಾಲುಸಾಲು ಕರ್ತವ್ಯ ಲೋಪಗಳ ಆರೋಪದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಆದೇಶ ಹೊರಡಿಸಿದ್ದಾರೆ.

- Advertisement -

ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957ರ ನಿಯಮ 10(1)(ಡಿ) ರನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪ್ರಕರಣದ ಹಿನ್ನೆಲೆ ಮತ್ತು ದೂರು:
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಇಂದರಗಿ ಗ್ರಾಮ ಘಟಕದ ಮಂಜುನಾಥ ಹೆಚ್. ಡೊಳ್ಳಿನ್ ಹಾಗೂ ಕರ್ಕಿಹಳ್ಳಿಯ ದ್ಯಾಮಣ್ಣ ಕೆ. ಹರಿಜನ ಅವರು ಸಲ್ಲಿಸಿದ್ದ ದೂರುಗಳ ಆಧಾರದ ಮೇಲೆ ತನಿಖೆಗೆ ಸೂಚಿಸಲಾಗಿತ್ತು. ಕುಕನೂರು ತಾಲೂಕು ಯೋಜನಾಧಿಕಾರಿ ಆನಂದ ಗರೂರು ಅವರು ನಡೆಸಿದ ತನಿಖಾ ವರದಿಯಲ್ಲಿ ಪಿಡಿಒ ನಾಗರಾಜ್ ಎಸ್. ಹೆಚ್. ಅವರ ಅವಧಿಯಲ್ಲಿ ನಡೆದಿರುವ ಹಲವಾರು ಹಣಕಾಸಿನ ಅಕ್ರಮಗಳು ಮತ್ತು ಕರ್ತವ್ಯ ಲೋಪಗಳು ಬೆಳಕಿಗೆ ಬಂದಿವೆ.

ತನಿಖಾ ವರದಿಯಲ್ಲಿ ಕಂಡುಬಂದಂತೆ, ಇಂದರಗಿ ಗ್ರಾಮಕ್ಕೆ ಕುಡಿಯುವ ನೀರಿನ ಸಾಮಗ್ರಿ ಖರೀದಿಗೆ ರೂ. 85,083 ವೆಚ್ಚ ಮಾಡಿದ್ದು, ಹಿಂದಿನ ಪಿಡಿಒ ಯಾವುದೇ ದಾಖಲೆಗಳನ್ನು ನೀಡಿಲ್ಲ. ಸೋಲಾರ್ ಸ್ಟ್ರೀಟ್ ಲೈಟಿಂಗ್ ಇನ್‌ಸ್ಟಾಲೇಶನ್‌ಗೆ ರೂ. 1,50,000 ವೆಚ್ಚ ಭರಿಸಲಾಗಿದ್ದು, ಈ ಬಗ್ಗೆ ಯಾವುದೇ ದಾಖಲಾತಿಗಳನ್ನು ಒದಗಿಸಿಲ್ಲ. 2020-21ರಲ್ಲಿ ಕಸ ವಿಲೇವಾರಿ ಸೇವೆಗಾಗಿ ರೂ. 3,00,000 ವೆಚ್ಚ ಭರಿಸಲಾಗಿದೆ. 2020-21ನೇ ಸಾಲಿನಲ್ಲಿ ಕುಡಿಯುವ ನೀರಿನ ಸೇವೆಗಾಗಿ ರೂ. 99,942 ಹಾಗೂ ಸಾಮಾನ್ಯ ಕಾಲೋನಿಯಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ರೂ. 2,96,990 ವೆಚ್ಚ ಮಾಡಲಾಗಿದ್ದು, ಇವುಗಳಿಗೂ ಸೂಕ್ತ ದಾಖಲೆಗಳನ್ನು ಹಾಜರುಪಡಿಸಿಲ್ಲ.

ಘನ ತ್ಯಾಜ್ಯ ವಿಲೇವಾರಿ ವಾಹನಕ್ಕಾಗಿ ರೂ. 1,50,000 ವೆಚ್ಚ ತೋರಿಸಲಾಗಿದೆಯಾದರೂ, ಗ್ರಾಮ ಪಂಚಾಯಿತಿಯಲ್ಲಿ ಕಳೆದ 8 ತಿಂಗಳಿನಿಂದ ಕಸ ಸಂಗ್ರಹಣೆ ಮಾಡಿಲ್ಲ. ಭೇಟಿ ನೀಡಿದಾಗ ವಾಹನವೂ ಪಂಚಾಯಿತಿಯಲ್ಲಿ ಕಂಡುಬಂದಿಲ್ಲ. ಮನೆಮನೆಗೆ ಕಸ ಸಂಗ್ರಹಣೆಯ ಬುಟ್ಟಿ ಖರೀದಿಗೆ ರೂ. 1,20,000 ವೆಚ್ಚ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ. 2021-22ರಲ್ಲಿ ನೈರ್ಮಲೀಕರಣಕ್ಕೆ ರೂ. 1,09,284 ವೆಚ್ಚ ಮಾಡಿದ್ದರೂ, 1, 2 ಮತ್ತು 4ನೇ ವಾರ್ಡ್‌ಗಳಲ್ಲಿ ಚರಂಡಿಗಳ ಸ್ವಚ್ಛತೆ ಮಾಡಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ.

2021-22ರಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಕಾಯ್ದಿರಿಸಿದ್ದ ರೂ. 84,415 ಅನುದಾನವನ್ನು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬಾಲಕಿಯರ ಶೌಚಾಲಯ ನಿರ್ಮಾಣಕ್ಕೆ ಬಳಸಲಾಗಿದೆ. 2022-23ರಲ್ಲಿ ಗ್ರಂಥಾಲಯ, ಶೌಚಾಲಯ ನಿರ್ಮಾಣಕ್ಕೆ ರೂ. 70,000 ವೆಚ್ಚ ಮಾಡಿದ್ದು, ಕಾಮಗಾರಿ ರೂ. 67,443ರಲ್ಲಿ ಪೂರ್ಣಗೊಂಡಿತ್ತು. ಆದರೆ, ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೇ ಆ ಶೌಚಾಲಯವನ್ನು ನೆಲಸಮಗೊಳಿಸಿ ಕರ್ತವ್ಯ ಲೋಪ ಎಸಗಿದ್ದಾರೆ. 2022-23ರಲ್ಲಿ ರೂ. 63,370 ವೆಚ್ಚದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದೆ. ಆದರೆ ಪರಿಶೀಲಿಸಿದ ಬಿಲ್ಲುಗಳಲ್ಲಿ ಜಿ.ಎಸ್.ಟಿ. ಸಂಖ್ಯೆ ಹಾಗೂ ಪೂರೈಕೆದಾರರ ವಿಳಾಸ ಇರಲಿಲ್ಲ.

2022-23ರಲ್ಲಿ ಇಂದರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು ಮತ್ತು ಬೀದಿ ದೀಪಗಳ ಅಳವಡಿಕೆಗೆ ರೂ. 5,37,769 ವೆಚ್ಚ ಮಾಡಲಾಗಿದೆ. ಒಂದೇ ತಿಂಗಳಿನಲ್ಲಿ ‘ಪಾರ್ವತಿ ಎಂಟರ್‌ಪ್ರೈಸಸ್’ ಎಂಬ ಒಂದೇ ಏಜೆನ್ಸಿಗೆ ನಿಯಮಾವಳಿಗಳಿಗೆ ವಿರುದ್ಧವಾಗಿ ಟೆಂಡರ್ ಕರೆಯದೆ ಖರೀದಿ ಮಾಡಿ ಕೆ.ಟಿ.ಪಿ.ಪಿ. (ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ) ನಿಯಮಗಳನ್ನು ಉಲ್ಲಂಘಿಸಲಾಗಿದೆ.

15ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆಯನ್ನು ಮಾರ್ಗಸೂಚಿಯಂತೆ ಸಿದ್ಧಪಡಿಸದೆ ನಿಯಮ ಉಲ್ಲಂಘಿಸಲಾಗಿದೆ. ಇ-ತಂತ್ರಾಂಶದಲ್ಲಿ ಬಹುತೇಕ ಎಲ್ಲಾ ಕಾಮಗಾರಿಗಳ ಛಾಯಾಚಿತ್ರಗಳನ್ನು ತಪ್ಪಾಗಿ ಅಪ್‌ಲೋಡ್ ಮಾಡಲಾಗಿದೆ.

ಈ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಜಿ.ಪಂ.ನಿಂದ ನೀಡಲಾಗಿದ್ದ ಕಾರಣ ಕೇಳುವ ನೋಟೀಸ್‌ಗೆ ಪಿಡಿಒ ನಾಗರಾಜ್ ಎಸ್. ಹೆಚ್. ಅವರು ದಿನಾಂಕ: 03-08-2026ರಂದು ನೀಡಿದ ಲಿಖಿತ ಸಮಜಾಯಿಷಿ/ಹೇಳಿಕೆ ಸಮಂಜಸವಾಗಿಲ್ಲದ ಕಾರಣ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 98ರನ್ವಯ ಆಪಾದಿತರು ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಅಮಾನತಿನಲ್ಲಿರುವ ಅಧಿಕಾರಿಯು ಕೇಂದ್ರಸ್ಥಾನವನ್ನು ಬಿಟ್ಟು ತೆರಳುವಂತಿಲ್ಲ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...