ಕೊಪ್ಪಳ | ಬಲ್ಡೋಟಾ ಕಾರ್ಖಾನೆ ವಿರುದ್ಧ ರೈತರ ಕಿಡಿ: ಜನಪ್ರತಿನಿಧಿಗಳಿಗೆ ಛೀಮಾರಿ, ಸರ್ಕಾರದ ಶವಯಾತ್ರೆ

Date:

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ. ಮನೆಯಲ್ಲಿ ಮಕ್ಕಳು, ವೃದ್ಧರು ಅನಾರೋಗ್ಯಕ್ಕೀಡಾಗುತ್ತಿದ್ದಾರೆಂದು ಆರೋಪಿಸಿದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದ ಗವಿಮಠದ ಆವರಣದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಪ್ರತಿಭಟನೆ ನಡೆಸಿದರು. ಬಳಿಕ
ಹಾಲಿವರ್ತಿ ಪ್ರದೇಶದ ರೈತರು, ತಮ್ಮ ಜಮೀನುಗಳಲ್ಲಿ ಬೆಳೆದ ಕಡಲೆ, ಮೆಕ್ಕೆಜೋಳ, ಜೋಳ ಸೇರಿದಂತೆ ಹಲವು ಬೆಳೆಗಳಿಗೆ ಕಾರ್ಖಾನೆಯ ಹೊಗೆಯಿಂದಾಗುವ ಹಾನಿಯನ್ನು ಪ್ರದರ್ಶಿಸಲು, ಹಾಳಾದ ಬೆಳೆಗಳನ್ನು ಎತ್ತಿನ ಬಂಡಿಗಳಲ್ಲಿ ಹೊತ್ತು ತಂದಿದ್ದರು. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಎದುರಿಸುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪ್ರತಿಭಟನಾ ಸ್ಥಳಕ್ಕೆ ತೊಟ್ಟಿಲು ಸಹಿತ ಆಗಮಿಸಿದ ಮಹಿಳೆಯರು, “ಕಾರ್ಖಾನೆಗಳ ಹೊಗೆಯಿಂದ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ಕಾರಣ ಬಂಜೆತನ ಎದುರಿಸುವಂತಾಗಿದೆ. ಮಕ್ಕಳಾಗದೆ ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ. ಕೆಲವು ಮಹಿಳೆಯರಿಗೆ ಗರ್ಭಪಾತವಾಗಿದೆ, ಮತ್ತೆ ಕೆಲವರಿಗೆ ಸಂತಾನವಿಲ್ಲ. ಮನೆಯಲ್ಲಿ ತೊಟ್ಟಿಲು ತೂಗುವ ಅದೃಷ್ಟವಿಲ್ಲದಂತಾಗಿದೆ” ಎಂದು ಖಾಲಿ ತೊಟ್ಟಿಲು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಕ್ಸಿಜನ್ ಮಾಸ್ಕ್ ಧರಿಸಿ ಹೋರಾಟದಲ್ಲಿ ಭಾಗಿಯಾಗಿರುವ ಹಿರೇಬಗನಾಳದ ರೈತ ಮಂಜುನಾಥ, ಕಾರ್ಖಾನೆಗಳಿಂದ ಬರುವ ಹೊಗೆಯಿಂದ ಉಸಿರಾಡಲು ಆಗುತ್ತಿಲ್ಲವೆಂದು ದೂರುವ ಮೂಲಕ ಪ್ರತಿಭಟನೆಯ ಗಮನ ಸೆಳೆದರು.

ಟ್ರ್ಯಾಕ್ಟರ್​ಗಳಲ್ಲಿ ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತರು, ಕೊಪ್ಪಳದ ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಶವಯಾತ್ರೆ ನಡೆಸಿದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರೂ ಕೂಡ ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿವೆ.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಕಲ್ಲು ತೂರಾಟ ಪ್ರಕರಣ: ಪ್ರಮೋದ್‌ ಮುತಾಲಿಕ್‌ ಜಿಲ್ಲಾ ಪ್ರವೇಶ ನಿಷೇಧಿಸಿ ಆದೇಶಿಸಿದ ಎಸ್‌ಪಿ

ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾದ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಜಶೇಖರ ಹಿಟ್ನಾಳ ಮತ್ತು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್​​ರನ್ನು ತರಾಟೆಗೆ ತೆಗೆದುಕೊಂಡ ರೈತರು, “ಕಾರ್ಖಾನೆ ವಿಸ್ತರಣೆ ಮಾಡುವಾಗ ಸುಮ್ಮನಿದ್ದು, ಈಗ ಇಲ್ಲಿಗ್ಯಾಕೆ ಬಂದ್ರಿ” ಎಂದು ಜನಪ್ರತಿನಿಧಿಗಳನ್ನು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...