ಕೊಪ್ಪಳ | ವಿದೇಶಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ : 3 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

Date:

ಗಂಗಾವತಿ ತಾಲೂಕಿನ ಸಾಣಾಪುರ ಗ್ರಾಮದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಮತ್ತು ಒಡಿಶಾ ಮೂಲದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಮೂವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

- Advertisement -

ಗಂಗಾವತಿಯ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ಎಂದು ಶಿಕ್ಷೆಗೊಳಗಾದವರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕಳೆದ ವರ್ಷದ ಮಾರ್ಚ್‌ನಲ್ಲಿ ಸಾಣಾಪುರಕ್ಕೆ ಇಸ್ರೇಲ್ ಮೂಲದ ಮಹಿಳೆ ಪ್ರವಾಸಕ್ಕೆ ಬಂದಿದ್ದರು. ಅವರೊಂದಿಗೆ ಒಡಿಶಾ ರಾಜ್ಯದ ಬಿಬಾಶ್ ಎಂಬ ಪ್ರವಾಸಿಗನೂ ಇದ್ದನು. ಜೊತೆಗೆ ಅಮೆರಿಕ ಹಾಗೂ ಮಹಾರಾಷ್ಟ್ರದ ಇನ್ನೂ ಕೆಲ ಪ್ರವಾಸಿಗರು ತಂಡದಲ್ಲಿದ್ದರು. ಇವರನ್ನು ಸ್ಥಳೀಯ ಹೋಂ ಸ್ಟೇ ಒಡತಿ ಕಾಲುವೆ ಪಕ್ಕದ ಬೆಳದಿಂಗಳ ಸೌಂದರ್ಯ ನೋಡಲು ಮಧ್ಯರಾತ್ರಿ ಕರೆದುಕೊಂಡು ಹೋಗಿದ್ದ ವೇಳೆ, ಪಾನಮತ್ತರಾಗಿ ಬಂದ ಆರೋಪಿಗಳು ವಿದೇಶಿ ಮಹಿಳೆ ಮತ್ತು ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ನಡೆಸಿದ್ದರು.

ಇದನ್ನೂ ಓದಿ : ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

ಘಟನೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ನ್ಯಾಯಾಲಯವು ಈ ಕಠಿಣ ತೀರ್ಪು ಪ್ರಕಟಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಮಾಲಿನ್ಯದ ಕತ್ತಲು ಕಳೆಯುವ ತನಕ ಚಳವಳಿ ನಿಲ್ಲಿಸಬೇಡಿ: ಮಹಿಮಾ ಪಟೇಲ್

ನಾವು ಅನಿವಾರ್ಯ ತಪ್ಪು ಮಾಡುವವರ ವ್ಯವಸ್ಥೆಯೊಳಗೆ ಸಿಕ್ಕಿ ಹಾಕಿಕೊಂಡಿದ್ದೇವೆ. ಅಂತಹ ಆಡಳಿತಗಾರರನ್ನು...

ಕೊಪ್ಪಳ | ಮದ್ಯಪಾನ ಮುಕ್ತ ಮಾದಿನೂರು ಗ್ರಾಮಕ್ಕೆ ಮಹಿಳೆಯರ ಮನವಿ

ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ತೀವ್ರ...

ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)...

ಕೊಪ್ಪಳ | ಪೋಕ್ಸೊ ತಡೆಗೆ ಶಾಲೆಗಳಲ್ಲಿ ಗೈರುಹಾಜರಿ ಪರಿಶೀಲಿಸಿ: ನ್ಯಾ. ಮಧು ಎನ್.ಆರ್

ಪ್ರತಿ ಶಾಲೆಯಲ್ಲೂ ಯಾವುದೇ ಮಗು ಮೂರು ದಿನಕ್ಕಿಂತ ಹೆಚ್ಚು ಗೈರು ಹಾಜರಾದರೆ...