ಕೊಪ್ಪಳ | ಗಾಂಜಾ ಸೇವನೆ, ಮಾರಾಟ ಪ್ರಕರಣ : ಮೂವರಿಗೆ ಜೈಲು ಶಿಕ್ಷೆ, ದಂಡ

Date:

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

- Advertisement -

ಗಂಗಾವತಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ‌ ಕೋರ್ಟ್ ನ್ಯಾಯಾಧೀಶ ನಾಗೇಶ ಪಾಟೀಲ್ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಈ ತೀರ್ಪು ಪ್ರಕಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕರಣ ಏನು?

2022ರ ಡಿಸೆಂಬರ್ 28ರಂದು ಗಂಗಾವತಿ ತಾಲೂಕಿನ ಸಾಣಾಪೂರ ಗ್ರಾಮ ಸೀಮಾದ ತುಂಗಭದ್ರಾ ನದಿ ದಂಡೆಯ ವಾಟರ್ ಫಾಲ್ಸ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಆರೋಪಿಗಳಿಂದ 1,500 ಮೌಲ್ಯದ 49 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಜಪ್ತಿ ಮಾಡಲಾಗಿತ್ತು. ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿಗಳಾದ ಸುಜಾತಾ ಹಾಗೂ ಶಾರವ್ವ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ದೋಷಾರೋಪ ಪಟ್ಟಿ ಆಧರಿಸಿ ನ್ಯಾಯಾಲಯ ತೀರ್ಪು ನೀಡಿದ್ದು, ಶ್ರೀನಿವಾಸ್ ಅಲಯಾಸ್ ಕತ್ತಿ ಶೀನಾ (ಸಾಣಾಪೂರ) ಹಾಗೂ ಸತ್ಯನಾರಾಯಣ‌ ಎಂಬುವರು ಗಾಂಜಾ ಸೇವನೆ ಸಾಬೀತಾದ ಹಿನ್ನೆಲೆಯಲ್ಲಿ (ಕಲಂ 27(ಬಿ) ಎನ್.ಡಿ.ಪಿ.ಎಸ್ ಕಾಯ್ದೆ) ತಲಾ 6 ತಿಂಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 10,000 ರೂ. ದಂಡ ವಿಧಿಸಲಾಗಿದೆ.

ಅಂಬೇಡ್ಕರ್ ನಗರದ ರಿಯಾಜ್ ಗಾಂಜಾ ಸರಬರಾಜು ಮಾಡಿದ ಅಪರಾಧಕ್ಕೆ (ಕಲಂ 20(ಬಿ)(ii)(ಎ) ಎನ್.ಡಿ.ಪಿ.ಎಸ್ ಕಾಯ್ದೆ) 1 ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ.‌

ಇದನ್ನೂ ಓದಿ : ಕೊಪ್ಪಳ | ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ

ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ನಿರಂಜನಸ್ವಾಮಿ ಡಾ.ದೇವಯ್ಯಸ್ವಾಮಿ ಹಿರೇಮಠ ಅವರು ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...