ಕೊಪ್ಪಳ | ನಗರಸಭೆ ಅಧ್ಯಕ್ಷರ ಸಹೋದರ & ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Date:

Advertisements

ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಮದ್‌ ಪಟೇಲ್ ಸಹೋದರ ಶಕೀಲ್ ಪಟೇಲ್ ಮತ್ತು ಅಧಿಕಾರಿಗಳ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ದಾಳಿಯಾಗಿದೆ.

ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಸಿದ ಮತ್ತು ಹಲವು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದರಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

2024ರಲ್ಲಿ ನಡೆದ 300ಕ್ಕೂ ಹೆಚ್ಚು ಕಾಮಗಾರಿಗಳಲ್ಲಿ ಸುಮಾರು ₹10 ಕೋಟಿಗೂ ಹೆಚ್ಚು ಭ್ರಷ್ಟಾಚಾರವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಈ ನಡುವೆ ಲೋಕಾಯುಕ್ತಕ್ಕೂ ಈ ಬಗ್ಗೆ ದೂರು ದಾಖಲಾಗಿತ್ತು.

ನಗರಸಭೆಯ ಜೆ.ಇ. ಸೋಮಲಿಂಗಪ್ಪ ಮನೆಯಿರುವ ಇಲ್ಲಿನ ಶಿವಗಂಗಾ ನಗರ, ಆ‌ರ್.ಐ. ಉಜ್ವಲ್ ಹಾಗೂ ಪ್ರವೀಣ್ ಕಂದಾರಿ ಸೇರಿದಂತೆ ವಿವಿಧೆಡೆ ತಪಾಸಣೆಯಲ್ಲಿ ತೊಡಗಿವೆ. ಲೋಕಾಯುಕ್ತ ಅಧಿಕಾರಿಗಳ ಒಂದು ತಂಡ ನಗರಸಭೆ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಲಡಾಖ್ ಹಿಂಸಾಚಾರ: ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನ

ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ನಡೆದ...

ಮಹಿಳೆಗೆ ಹಲ್ಲೆ | ಸೀರೆ ಅಂಗಡಿ ಮಾಲೀಕ & ಸಹಾಯಕ ಬಂಧನ

ಮಹಿಳೆಗೆ ಹಲ್ಲೆ ಮಾಡಿದ್ದ ಸೀರೆ ಅಂಗಡಿಯ ಮಾಲೀಕ ಮತ್ತು ಆತನ ಸಹಾಯಕನನ್ನು...

ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ NWKRTC ಅಧ್ಯಕ್ಷ ಸ್ಥಾನದಿಂದ ವಜಾ

ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣರನ್ನು ಸಂಪುಟದಿಂದ ಕೈಬಿಟ್ಟ ಬಳಿಕ ಮತ್ತೋರ್ವ...

ಸಾಮಾಜಿಕ, ಆರ್ಥಿಕ ಶೈಕ್ಷಣಿಕ ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಕಾರ: ಷರತ್ತು ವಿಧಿಸಿ ಸಮೀಕ್ಷೆಗೆ ಅನುಮತಿ

ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ...

Download Eedina App Android / iOS

X