ಕೊಪ್ಪಳ | ಅನ್ಯಜಾತಿ ಯುವಕನೊಂದಿಗೆ ಮದುವೆ : 4 ತಿಂಗಳ ಸಹೋದರಿಯ ಹತ್ಯೆಗೆ ಯತ್ನಿಸಿದ ಅಣ್ಣ!

Date:

ಕೊಪ್ಪಳ ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕೆಯ ಸ್ವಂತ ಸಹೋದರನೇ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -

23 ವರ್ಷದ ಮೀನಾಕ್ಷಿ ಎರಡು ವರ್ಷಗಳ ಹಿಂದೆ ಎಸ್‌ಟಿ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದು, ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರೂ ಮಂಜುನಾಥ್ ಎನ್ನುವ ಸಹೋದರ ಕೊಡಲಿಯಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಮೀನಾಕ್ಷಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ವ್ಯಾಪ್ತಿಯ ಚಿತ್ತಾಪೂರ ಮೂಲದ ಕುರುಬ ಸಮುದಾಯದ ಮೀನಾಕ್ಷಿ, ಕುಟುಂಬದ ವಿರೋಧದ ನಡುವೆಯೂ ಎರಡು ವರ್ಷಗಳ ಹಿಂದೆ ಹಂದ್ರಾಳ ಗ್ರಾಮದ ನಾಯಕ ಸಮುದಾಯದ ಉದಯನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇದರಿಂದ ಆಕೆಯ ಸಹೋದರ ಮಂಜುನಾಥ್ ಆಕ್ರೋಶಗೊಂಡು ಸಿಟ್ಟಿನಲ್ಲೇ ಇದ್ದನು.

ಮದುವೆ ಹಿನ್ನೆಲೆ ಮೀನಾಕ್ಷಿ ಪತಿಯೊಂದಿಗೆ ಹಂದ್ರಾಳ ಗ್ರಾಮಕ್ಕೆ ಬಂದಿದ್ದರು. ಇದೇ ವೇಳೆ ಮಂಜುನಾಥ್ ಆಕೆಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದರೆಂದು ತಿಳಿದುಬಂದಿದೆ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮೀನಾಕ್ಷಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬಿ ಎಂ ರೋಹಿಣಿ ಎಂಬ ಮಾನವೀಯತೆಯ ಪ್ರತಿರೂಪ

ಅಳವಂಡಿ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಹೋದರಿ ಮೀನಾಕ್ಷಿಯನ್ನು ಕೊಲೆ ಮಾಡಲು ಯತ್ನಿಸಿದ್ದ ಸಹೋದರ ಮಂಜುನಾಥನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...