ಕೊಪ್ಪಳ | ಸೋನಮ್‌ ವಾಂಗ್‌ಚುಕ್‌ ಸ್ಥಳಾಂತರ ಖಂಡಿಸಿ ರಾಷ್ಟ್ರಪತಿಗೆ ಮನವಿ

Date:

ಶಿಕ್ಷಣ ತಜ್ಞ, ಪರಿಸರವಾದಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನೆಯ ಸ್ಥಳದಿಂದ ಬಲವಂತವಾಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಕೊಪ್ಪಳದ ಕುಕನೂರಿನ ಸಮಾನ ಮನಸ್ಕರ ಬಳಗ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಸಮಾನ ಮನಸ್ಕರ ಬಳಗದ ಭೀಮಾಶಂಕರ ಪಾಣೆಗಾಂವ, “ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಾದ ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು.

“ಕಳೆದ 21 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ಪೊಲೀಸರು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸಿರುವುದು ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಭಾರೀ ಪ್ರಮಾಣದ ಪೊಲೀಸ್ ಪಡೆಯನ್ನು ನಿಯೋಜಿಸಿರುವುದು ಖಂಡನೀಯ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವವರೊಂದಿಗೆ ಸರ್ಕಾರ ಅರ್ಥಪೂರ್ಣ ಸಂವಾದ ನಡೆಸಿ, ಚರ್ಚೆಯ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಆದರೆ ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿರುವ ಕ್ರಮವು ಸರ್ಕಾರದ ಸರ್ವಾಧಿಕಾರಿ ಮನೋಭಾವವನ್ನು ಬಯಲಿಗೆಳೆಯುತ್ತದೆ” ಎಂದು ಆರೋಪಿಸಿದರು.

“ವಾಂಗ್‌ಚುಕ್ ಅವರ ಆರೋಗ್ಯ ರಕ್ಷಣೆಗೆ ಅಗತ್ಯ ವೈದ್ಯಕೀಯ ಹಾಗೂ ಮಾನವೀಯ ಕ್ರಮಗಳನ್ನು ಕೈಗೊಳ್ಳಬೇಕು. ಅವರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸಂವಾದ ಆರಂಭಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು, “ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ರವಾನಿಸಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾನ ಮನಸ್ಕರ ಬಳಗದ ಪ್ರಮುಖರಾದ ರುದ್ರಪ್ಪ ಬಂಡಾರಿ, ಬಸವರಾಜ ಕೊಡ್ಲಿ, ಮಂಜುನಾಥ ಅಂಗಡಿ, ಕನಕರಾಯ ಬಜೇಂತ್ರಿ, ಚಂದ್ರು ಆರ್. ಭಾನಾಪುರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...