ಕೊಪ್ಪಳ | ಪ್ರಧಾನ್ ರಾಜೀನಾಮೆ ದೇಶದ ಯುವಶಕ್ತಿಗೆ ಸಂದ ಗೆಲುವು: AIDSO ಶ್ಲಾಘನೆ

Date:

ಕೇಂದ್ರ ಸರ್ಕಾರದ ವಿರುದ್ಧ ಹೋರಾಡಿ, ಶಿಕ್ಷಣ ಸಚಿವ ರಾಜೀನಾಮೆಗೆ ಪಟ್ಟು ಹಿಡಿದು ಜಯಿಸಿದ ಯುವಜನತೆಗೆ ಕೊಪ್ಪಳ AIDSO (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಯುವಕರ ದೃಢಸಂಕಲ್ಪದ ಮುಂದೆ ಯಾವ ಸರ್ವಾಧಿಕಾರಿ ಶಕ್ತಿಯೂ ನಿಲ್ಲದು ಎಂಬ ಸತ್ಯ ಸಾಬೀತಾಗಿದೆ ಎಂದು AIDSO ಅಭಿಪ್ರಾಯಿಸಿದೆ.

- Advertisement -

ನಿರ್ಲಕ್ಷ್ಯದ ಜವಾಬ್ದಾರಿ ತೆಗೆದುಕೊಳ್ಳುವ ಬದಲು, ಪ್ರತಿಭಟನಾಕಾರರನ್ನು ‘ರಾಷ್ಟ್ರವಿರೋಧಿಗಳು’ ನಡೆಸುತ್ತಿದ್ದಾರೆ ಎಂಬ ಪ್ರಧಾನ್‌ ಹೇಳಿಕೆಯನ್ನು ಖಂಡಿಸಿದ AIDSO, ವಿದ್ಯಾರ್ಥಿ ಸಮೂಹ, ದೇಶದ ಯುವಕರು ಹಾಗೂ ಸಾಮಾನ್ಯ ಜನರ ದೀರ್ಘಕಾಲದ ಅಸಮಾಧಾನ, ಅಸಹನೀಯ ನೋವಿನಿಂದ ಈ ಹೋರಾಟ ಹುಟ್ಟಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡುತ್ತಿರುವ, ನಿರುದ್ಯೋಗ ಬಿಕ್ಕಟ್ಟು ಸೃಷ್ಟಿಸುತ್ತಿರುವುದಲ್ಲದೆ ಸಂಸ್ಕೃತಿಯ ಹೆಸರಿನಲ್ಲಿ ಮಾನವೀಯ ಆಯಾಮಗಳನ್ನು ಛಿದ್ರಗೊಳಿಸುತ್ತಿರುವ ಈ ಸರ್ವಾಧಿಕಾರಿ ಕಾರ್ಪೊರೇಟ್ ಪರ ನೀತಿಗಳಿಂದಲೇ ಇಂತಹ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಎಐಡಿಎಸ್ಓ ಆರೋಪಿಸಿದೆ.

ದೆಹಲಿಯಲ್ಲಿ ಪ್ರತಿಭಟನಾಕಾರರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಮತ್ತು ಹೆಣ್ಣುಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿ ಮತ್ತು ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕೆಂದು ನಾವು ಆಗ್ರಹಿಸುತ್ತೇವೆ. ಆಂದೋಲನದ ವೇಳೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರ ಮೇಲೆ ಹಾಕಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕೆಂದು AIDSO ಒತ್ತಾಯಿಸಿದೆ.

NTA ರದ್ದುಗೊಳಿಸಲು ಮತ್ತು ದುಷ್ಟ ನೀತಿಯಾದ NEP-2020 ವಿರುದ್ಧ ಹೋರಾಡಲು ಹೋರಾಟವನ್ನು ಮುಂದುವರಿಸಲು ಈ ದೇಶದ ವಿದ್ಯಾರ್ಥಿಗಳು ಮತ್ತು ಯುವಜನತೆಗೆ AIDSO ಕರೆ ನೀಡಿದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸಲು ಹೋರಾಟವನ್ನು ಮುಂದಕ್ಕೆ ಕೊಂಡೊಯ್ದು ತೀವ್ರಗೊಳಿಸಲು ಎಡಪಂಥೀಯ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು – ವಿಶೇಷವಾಗಿ ದೇಶದಾದ್ಯಂತದ ವಿದ್ಯಾರ್ಥಿ ಸಂಘಟನೆಗಳು – ಒಗ್ಗೂಡಬೇಕೆಂದು AIDSO ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಗಂಗರಾಜ್ ಅಳ್ಳಳ್ಳಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಎಣ್ಣೆಕಾಳು ಉತ್ಪಾದನೆ ಸ್ವಾವಲಂಬನೆ ಅಗತ್ಯ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಎಣ್ಣೆಕಾಳು ಬೆಳೆಗಳ ಉತ್ಪಾದನೆ ಹೆಚ್ಚಿಸುವ ಮೂಲಕ ಸ್ವಾವಲಂಬನೆ ಸಾಧಿಸಬೇಕು. ಕುಸುಬೆ,...

ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಟ: ಇಲಾಖೆಗೆ ದಂಡ ವಿಧಿಸಿದ ಶಿವಮೊಗ್ಗ ಗ್ರಾಹಕ ಆಯೋಗ

ರೈಲಿನಲ್ಲಿ ನೀರಿನ ಸೌಲಭ್ಯ ಕಲ್ಪಿಸದೆ ಸೇವಾ ನ್ಯೂನ್ಯತೆ ಎಸಗಿದ್ದಕ್ಕೆ ಸಂಬಂಧಿಸಿದಂತೆ ರೈಲ್ವೆ...

ಈ ದಿನ ಸಂಪಾದಕೀಯ | ಮೋದಿಯ 56 ಇಂಚಿನ ಅಳ್ಳೆದೆ ಮತ್ತು ಚೀನಾದ ಅತಿಕ್ರಮಣ

ಒಂದು ಕಡೆ ಚೀನಾ ನಮ್ಮ ಗಡಿ ಅತಿಕ್ರಮಿಸುತ್ತಿದ್ದರೆ, ಇನ್ನೊಂದು ಕಡೆ ಅದೇ...