ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ ವೀರೇಶಕುಮಾರ ಆನೆಹೊಸೂರು (33) ಅವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು.
ಗರ್ಭಿಣಿಯಾಗಿದ್ದ ರೇಖಾ ಅವರು ಹೆರಿಗೆ ರಜೆ ಪಡೆದು ತಮ್ಮ ತವರು ಮನೆಯಾದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಇದ್ದಲಗಿ ಗ್ರಾಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತರ ಪತಿ ವೀರೇಶಕುಮಾರ ಅವರು ರಾಮನಗರ ಜಿಲ್ಲೆಯಲ್ಲಿ ನಾಗರಿಕ ಪೊಲೀಸ್ ಆಗಿ ನೇಮಕಗೊಂಡಿದ್ದು, ಪ್ರಸ್ತುತ ಧಾರವಾಡದಲ್ಲಿ ಬುನಾದಿ ತರಬೇತಿ ಪಡೆಯುತ್ತಿದ್ದಾರೆ. ನ.24ರಂದು ಇದ್ದಲಗಿ ಗ್ರಾಮದ ಸಮೀಪ ಪೊಲೀಸ್ ಇಲಾಖೆಯ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಬೀದರ್ | ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ, ಯೋಗ ಅಗತ್ಯ: ಸಚಿವ ಈಶ್ವರ ಖಂಡ್ರೆ



