ಕೊಪ್ಪಳ | SIR ವಿರೋಧಿಸಿ ಏಪ್ರಿಲ್ 23 ರಂದು ಪ್ರತಿಭಟನಾ ಸಮಾವೇಶ; ಅಲ್ಲಮ ಪ್ರಭು ಬೆಟ್ಟದೂರು

Date:

ಕರ್ನಾಟಕದಲ್ಲಿ SIR ವಿರೋಧಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳೆಲ್ಲಾ ಸೇರಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಮಾವೇಶ” ವನ್ನು ಏಪ್ರಿಲ್ 23ರಂದು ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದರು.

ನಗರದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ದೇಶದಲ್ಲಿ ಅರ್ಧಕ್ಕಿಂತ ಹೆಚ್ಚು ಕಡಿಮೆ ಕೋಟಿ ಜನರ ಮತದಾನದ ಹಕ್ಕನ್ನು ಕಸಿದು ಚುನಾವಣೆ ನಡೆಸಲಾಗುತ್ತಿದೆ. ಸುಪ್ರೀಂ ಕೋರ್ಟು ಮಾತಿನಲ್ಲಿ ಚಾಟಿ -ಮಾಡುವುದರಲ್ಲಿ ಸಾಥಿ’ ಎಂಬಂತೆ ನಡೆದುಕೊಳ್ಳುತ್ತಿದೆ. ಇದು ಪ್ರಜಾತಂತ್ರ ಪ್ರೇಮಿಗಳೆಲ್ಲರ ಎದೆಗಳಿಗೆ ಆದರೆ ಇರಿದಿರುವ ಚೂರಿ ಎಂದರು.

ಈಗಾಗಲೇ 13 ರಾಜ್ಯಗಳ 6.5 ಕೋಟಿ ಜನರ ಮತದಾನದ ಹಕ್ಕು ರದ್ದಾಗಿದೆ. ಹಂತಹಂತವಾಗಿ ಇದು ಇಡೀ ದೇಶದ ವಿದ್ಯಮಾನವಾಗಲಿದೆ. ಪ್ರಜಾತಂತ್ರ ವ್ಯವಸ್ಥೆಯಿಂದ ಹೊರದಬ್ಬಲ್ಪಟ್ಟಿರುವ ಲಕ್ಷಾಂತರ ಜನರ ಜೊತೆ ಸಾಲಿಡಾರಿಟಿ ವ್ಯಕ್ತಪಡಿಸಿ, ಕರ್ನಾಟಕದಲ್ಲೂ ಇದನ್ನೇ ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸಮಾವೇಶದಲ್ಲಿ ಮತದಾನದ ಹಕ್ಕನ್ನು ಕಳೆದುಕೊಂಡಿರುವ ಬಂಗಾಳದ ಸಂತ್ರಸ್ತರು ಸ್ವಯಂ ಬಂದು ಭಾಗವಹಿಸುತ್ತಿದ್ದಾರೆ. ರಾಜ್ಯದ ರೈತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ, ಕನ್ನಡಪರ, ನಾಗರೀಕ ಹಕ್ಕು ಹೋರಾಟಗಾರ ಮುಂತಾದ ಸಂಘಟನೆಗಳ ಮುಖ್ಯಸ್ಥರು ಹಾಗೂ ಬಿಜೆಪಿ, ಜೆಡಿಎಸ್‌ ಹೊರತುಪಡಿಸಿದಂತೆ ಮಿಕ್ಕೆಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಇದು ಇಡೀ ಕರ್ನಾಟಕದ ಕೂಗಾಗಿ ಹೊರಹೊಮ್ಮಲಿದೆ ಎಂದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕರ್ನಾಟಕ ಜನಶಕ್ತಿ.ಕಾರ್ಯದರ್ಶಿ ಮಂಡಳಿ ಸದಸ್ಯರು ದುರುಗೇಶ ಬರಗೂರು, ಪಾಮಣ್ಣ ಕನಕಗಿರಿ, ಎದ್ದೇಳು ಕರ್ನಾಟಕ ರಾಜಾ ನಾಯಕ್, ಚೆನ್ನಬಸಪ್ಪ ಫಾಸ್ಟರ್, Md ಸಿರಾಜ್ ಸಿದ್ದಾಪುರ, ಆದಿಲ್ ಪಾಟೀಲ್ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಅನ್ಸಾರ್ ಪವನ್ ಇನ್ನಿತರರು ಇದ್ದರು.


WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...